ಗುರುವಾರ , ಏಪ್ರಿಲ್ 2, 2020
19 °C

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ₹15 ಸಾವಿರ ಕೋಟಿ ಘೋಷಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಕೊರೊನಾ ವೈರಸ್ ತಡೆಗೆ ಮುಂದಿನ 21 ದಿನಗಳ ಕಾಲ ದೇಶದಾದ್ಯಂತ ಸಂಪೂರ್ಣ ಲಾಕ್‌ಡೌನ್ ಮಾಡಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ₹15,000 ಕೋಟಿ ಗಳನ್ನು ಮೀಸಲಿಡಲಾಗಿದೆ.

ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿ, ಈ 21 ದಿನಗಳ ಕಾಲ ನಾವು ಎಚ್ಚರಿಕೆಯಿಂದಿರುವ ಅಗತ್ಯವಿದೆ. ಇಲ್ಲದಿದ್ದಲ್ಲಿ ಭಾರತ 21 ವರ್ಷಗಳ ಕಾಲ ಹಿಂದಕ್ಕೆ ಹೋಗುತ್ತದೆ. ಹಾಗಾಗಿ ಜನರು ಮನೆಯಿಂದ ಹೊರಗೆ ಹೋಗುವ ಒಂದು ಹೆಜ್ಜೆ ಕೂಡ ಕೊರೊನಾದಂತಹ ಗಂಭೀರ ಸಮಸ್ಯೆಗೆ ಆಹ್ವಾನ ನೀಡಬಹುದು. ಕೊರೊನಾವೈರಸ್ ವಿರುದ್ಧ ಹೋರಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಹೇಳಿದರು. 

ಕೊರೊನಾ ವೈರಸ್ ವಿರುದ್ಧ ಹೋರಾಡಲು 15 ಸಾವಿರ ಕೋಟಿ ಮೀಸಲಿಡಲಾಗಿದೆ. ಕೊರೊನಾವೈರಸ್ ಪರೀಕ್ಷಾ ಕೇಂದ್ರಗಳು, ಪ್ರತ್ಯೇಕ ವಾರ್ಡ್ಸ್, ಹಾಸಿಗೆ ಸೌಲಭ್ಯ, ಐಸಿಯುಗಳು, ವೆಂಟಿಲೇಟರ್‌ಗಳು ಮತ್ತು ತರಬೇತಿ ನೀಡುವ ವೈದ್ಯಕೀಯ ಕಾರ್ಯಕರ್ತರು ಸೇರಿದಂತೆ ಇತರೆ ಸೌಲಭ್ಯಗಳಿಗಾಗಿ ₹15,000 ಕೋಟಿ ಮೀಸಲಿಡಲಾಗುತ್ತದೆ ಎಂದು ಮೋದಿ ತಿಳಿಸಿದರು.
ಖಾಸಗಿ ಸಂಸ್ಥೆಗಳು ದೇಶದ ಜನರ ನೆರವಿಗಾಗಿ ಧಾವಿಸಿರುವುದಕ್ಕೆ ಸಂತೋಷವಾಗಿದೆ. ವೈದ್ಯರ ಸಲಹೆಯಿಲ್ಲದೆಯೇ ಯಾವುದೇ ರೀತಿಯ ಔಷಧಗಳನ್ನು ಸೇವಿಸಬೇಡಿ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು