ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಸಚಿವರ ವಿದೇಶ ಪ್ರವಾಸಕ್ಕೆ ಕೇಂದ್ರ ನಿರಾಕರಣೆ

Last Updated 17 ಅಕ್ಟೋಬರ್ 2018, 19:26 IST
ಅಕ್ಷರ ಗಾತ್ರ

ತಿರುವನಂತಪುರ: ಪ್ರವಾಹದಿಂದ ಸಂಕಷ್ಟ ಎದುರಿಸುತ್ತಿರುವ ಕೇರಳದ ಪುನರ್‌ನಿರ್ಮಾಣ ಕಾರ್ಯಕ್ಕಾಗಿ ನಿಧಿ ಸಂಗ್ರಹಿಸಲು ವಿದೇಶಗಳಿಗೆ ಪ್ರವಾಸ ತೆರಳಲು ಮುಂದಾಗಿದ್ದ ರಾಜ್ಯ ಸಚಿವರಿಗೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ.

‘ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮಾತ್ರ ವಿದೇಶ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ’ ಎಂದು ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಗಲ್ಫ್ ಒಕ್ಕೂಟದ ರಾಷ್ಟ್ರಗಳಿಗೆ ತೆರಳಿರುವ ಅವರು ಅ.21ಕ್ಕೆ ವಾಪಸಾಗುವ ನಿರೀಕ್ಷೆ ಇದೆ.

ಈ ಮೊದಲು,ಇವರ ಜತೆಗೆ 17 ಸಚಿವರುನಿಧಿ ಸಂಗ್ರಹಕ್ಕೆ ಯುರೋಪ್‌ ಹಾಗೂ ಗಲ್ಫ್ ಒಕ್ಕೂಟದ ರಾಷ್ಟ್ರಗಳಿಗೆ ತೆರಳಲು ಸಿದ್ಧರಾಗಿದ್ದರು.

‘ಅ.17ರಿಂದ 21ರವರೆಗೆಪ್ರತಿ ಸಚಿವರೂ ಬೇರೆ ಬೇರೆ ರಾಷ್ಟ್ರಗಳಿಗೆ ಭೇಟಿ ಕೇರಳ ವಲಸಿಗರಿಂದ ನಿಧಿ ಸಂಗ್ರಹಿಸಲಿದ್ದಾರೆ’ ಎಂದು ವಿಜಯನ್ ಅ.3ರಂದು ಹೇಳಿದ್ದರು.

ಆಗಸ್ಟ್‌ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿದ್ದ ಕೇರಳದಲ್ಲಿ 493 ಮಂದಿ ಮೃತಪಟ್ಟಿದ್ದರು. ರಾಜ್ಯದ ಪುನರ್‌ನಿರ್ಮಾಣಕಾರ್ಯಕ್ಕಾಗಿ ವಿಶ್ವಬ್ಯಾಂಕ್, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ ಹಾಗೂ ಇತರೆ ಸಂಸ್ಥೆಗಳಿಂದ ₹15,900 ಕೋಟಿ ಸಂಗ್ರಹಿಸಲು ರಾಜ್ಯ ಸರ್ಕಾರ ಕಳೆದ ತಿಂಗಳು ನಿರ್ಣಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT