ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯ ಫಾಸ್ಟ್ಯಾಗ್‌ ಜಾರಿಗೆ ಸಿದ್ಧತೆ

ರಾಷ್ಟ್ರೀಯ ಹೆದ್ದಾರಿಗಳಿಗೆ ಅನ್ವಯ * ಡಿಸೆಂಬರ್ 1ರಿಂದ ಜಾರಿ
Last Updated 17 ನವೆಂಬರ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಡಿಸೆಂಬರ್‌ 1ರಿಂದ ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕವನ್ನು ಡಿಜಿಟಲ್‌ ರೂಪದಲ್ಲಿ ಸಂಗ್ರಹಿಸಲಾಗುತ್ತದೆ. ಇದನ್ನು ಯಶಸ್ವಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ವಿಶೇಷ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ.

ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಬೇಕು ಅಂದರೆ, ಹೆದ್ದಾರಿಗಳಲ್ಲಿ ಚಲಿಸುವ ಪ್ರತಿ ವಾಹನವೂ ‘ಫಾಸ್ಟ್ಯಾಗ್‌’ (FASTag) ಹೊಂದಿರಬೇಕು. ಅಲ್ಲದೆ,ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಎಲ್ಲಾ ಟೋಲ್‌ ಬೂತ್‌ಗಳಲ್ಲಿ‘ಫಾಸ್ಟ್ಯಾಗ್‌ ರೀಡರ್‌’ಗಳು ಇರಬೇಕು. ಟೋಲ್‌ಬೂತ್‌ ಸಿಬ್ಬಂದಿಗೆ ಈ ಬಗ್ಗೆ ತರಬೇತಿ ನೀಡಬೇಕು. ಈ ಎಲ್ಲಾ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕಿದೆ. ಹೀಗಾಗಿ ಇದರ ಮೇಲ್ವಿಚಾರಣೆಗೆ ವಿಶೇಷ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಸಚಿವಾಲಯವು ಹೇಳಿದೆ.

ಈ ಅಧಿಕಾರಿಗಳ ಹುದ್ದೆಯನ್ನು,‘ಕೇಂದ್ರೀಯ ಪ್ರಭಾರಿ ಅಧಿಕಾರಿ’ ಎಂದು ಹೆಸರಿಸಲಾಗಿದೆ. ಈ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹೆದ್ದಾರಿ ನಿರ್ವಹಣೆ ಕಂಪನಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಡುವೆ ಸಮನ್ವಯ ಅಧಿಕಾರಿಯಾಗಿಯೂ ಇವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.

ಈಗ ಟೋಲ್ ಹೆದ್ದಾರಿಗಳಲ್ಲಿ ಶುಲ್ಕ ಪಾವತಿ ಮಾಡದಿದ್ದರೂ, ಹಲವು ವಾಹನಗಳ ಸಂಚಾರಕ್ಕೆ ಅನಧಿಕೃತವಾಗಿ ಅವಕಾಶ ನೀಡಲಾಗುತ್ತಿದೆ. ಕಡ್ಡಾಯ ಫಾಸ್ಟ್ಯಾಗ್ ಜಾರಿಯಾದರೆ, ಇದಕ್ಕೆ ಕಡಿವಾಣ ಬೀಳಲಿದೆ. ಹೀಗಾಗಿ ಟೋಲ್‌ ಶುಲ್ಕ ಮೂಲದ ಆದಾಯದಲ್ಲಿ ಹೆಚ್ಚಳ ಆಗಲಿದೆ ಎಂದು ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT