ಏಕತಾ ಮೂರ್ತಿಗೆ ₹300 ಕೋಟಿ ನೀಡಿದ್ದ ಕೇಂದ್ರ ಸರ್ಕಾರ

7

ಏಕತಾ ಮೂರ್ತಿಗೆ ₹300 ಕೋಟಿ ನೀಡಿದ್ದ ಕೇಂದ್ರ ಸರ್ಕಾರ

Published:
Updated:

ನವದೆಹಲಿ: ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಡಿಯಾದಲ್ಲಿ ವಿಶ್ವದ ಅತಿ ಎತ್ತರದ ಏಕತಾ ಮೂರ್ತಿ ನಿರ್ಮಿಸಲು ಕೇಂದ್ರ ಸರ್ಕಾರ ₹300 ಕೋಟಿ ಮಂಜೂರು ಮಾಡಿತ್ತು ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ಪಿ. ರಾಧಾಕೃಷ್ಣನ್‌ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಪ್ರತಿಮೆ ನಿರ್ಮಾಣಕ್ಕೆ ಹಣ ನೀಡುವಂತೆ ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಹಣಕಾಸು ಸಚಿವಾಲಯ ಸೂಚಿಸಿರಲಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಪ್ರತಿಮೆ ನಿರ್ಮಾಣಕ್ಕೆ ವಿದೇಶಿ ಅನುದಾನ ಪಡೆದ ಬಗ್ಗೆ ಸಚಿವಾಲಯಕ್ಕೆ ಯಾವುದೇ ಮಾಹಿತಿ ಇಲ್ಲ ಎಂದೂ ತಿಳಿಸಿದ್ದಾರೆ.

ಅಕ್ಟೋಬರ್ 31 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದರು. ಪ್ರತಿಮೆ ನಿರ್ಮಾಣಕ್ಕೆ ಒಟ್ಟು ₹3000 ಕೋಟಿ ವಿನಿಯೋಗಿಸಲಾಗಿದೆ ಎಂದು ಅಂದಾಜಿಸಲಾಗಿದೆ.

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !