ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ: ಎತ್ತರಿಸಿದ ಮಾರ್ಗ ಪ್ರಸ್ತಾವ ತಿರಸ್ಕೃತ

Last Updated 26 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ತಿರುವನಂತಪುರ: ಕರ್ನಾಟಕದ ಬಂಡೀಪುರ ಅಭಯಾರಣ್ಯವನ್ನು ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಎತ್ತರಿಸಿದ ಮಾರ್ಗ ನಿರ್ಮಿಸುವ ಕೇರಳ ಸರ್ಕಾರದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಈ ಮಾರ್ಗಕ್ಕೆ ಪರ್ಯಾಯವಾಗಿ ರಾಷ್ಟ್ರೀಯ ಹೆದ್ದಾರಿ 275 ಮತ್ತು ರಾಜ್ಯ ಹೆದ್ದಾರಿ 90ನ್ನು ಒಳಗೊಂಡ ಮಾರ್ಗವನ್ನು ಅಭಿವೃದ್ಧಿಪಡಿಸುವ ಪ್ರಸ್ತಾವದ ಬಗ್ಗೆ ಕಳವಳ ವ್ಯಕ್ತಪಡಿಸಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದರು.

ರಾಷ್ಟ್ರೀಯ ಹೆದ್ದಾರಿ 766ರಲ್ಲಿ (ಈ ಹಿಂದೆರಾಷ್ಟ್ರೀಯ ಹೆದ್ದಾರಿ 212) ಎತ್ತರಿಸದ ಮಾರ್ಗ ನಿರ್ಮಿಸುವ ಬಗ್ಗೆ ವಿಜಯನ್ ಅವರು ಈ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

‘ಉನ್ನತ ಮಟ್ಟದ ಸಭೆಗಳಲ್ಲಿಈ ವಿಚಾರವನ್ನು ಈಗಾಗಲೇ ಹಲವು ಬಾರಿ ಚರ್ಚಿಸಲಾಗಿದೆ. ಈ ಮಾರ್ಗದಲ್ಲಿ ರಾತ್ರಿ ಸಂಚಾರ ನಿಷೇಧವನ್ನೂಮುಂದುವರಿಸಲು ನಿರ್ಧರಿಸಲಾಗಿದೆ’ ಎಂದು ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 212ಕ್ಕೆ ಪರ್ಯಾಯ ಮಾರ್ಗವನ್ನು ಅಭಿವೃದ್ಧಿಪಡಿಸುವ ಬಗ್ಗೆ ಮತ್ತು ಈ ಹೆದ್ದಾರಿಯಲ್ಲಿ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಯೋಚಿಸಿ ಎಂದು ಸುಪ್ರಿಂ ಕೋರ್ಟ್‌ ಈ ಹಿಂದೆಯೇ ಸೂಚನೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT