ಶುಕ್ರವಾರ, ಜನವರಿ 24, 2020
20 °C

ಗಣರಾಜ್ಯೋತ್ಸವಕ್ಕೆ ಪಶ್ಚಿಮ ಬಂಗಾಳದ ಸ್ತಬ್ದಚಿತ್ರ ತಿರಸ್ಕಾರ: ಮಮತಾ ಕಿಡಿ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ಪ್ರದರ್ಶನದ ಪ್ರಸ್ತಾವವನ್ನು ತಿರಸ್ಕರಿಸಿರುವುದಕ್ಕೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ) ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕಾಗಿ ಕೇಂದ್ರ ಇಂತಹ ನಿರ್ಧಾರ ಕೈಗೊಂಡಿದೆ. ಇದು ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಹೇಳಿದೆ.

’ಪಶ್ಚಿಮ ಬಂಗಾಳದ ವಿರುದ್ಧ ದ್ವೇಷದ ಧೋರಣೆ ಸಾಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸಿದ್ದಕ್ಕಾಗಿ ರಾಜ್ಯದ ಜತೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಈ ಹಿಂದೆಯೂ ಇದೇ ರೀತಿ ಪ್ರಸ್ತಾವವನ್ನು ತಿರಸ್ಕರಿಸಲಾಗಿದೆ. ಇಂತಹ ಕೀಳು ರಾಜಕೀಯದಿಂದ ಜನವಿರೋಧಿ ನೀತಿಗಳನ್ನು ವಿರೋಧಿಸುವುದನ್ನು ಸ್ಥಗಿತಗೊಳಿಸುವುದಿಲ್ಲ‘ ಎಂದು ಪಶ್ಚಿಮ ಬಂಗಾಳ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ತಪಸ್‌ ರಾಯ್‌ ಟೀಕಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಪಶ್ಚಿಮ ಬಂಗಾಳ ಸರ್ಕಾರ ಸರಿಯಾಗಿ ನಿಯಮಾವಳಿಗಳನ್ನು ಪಾಲಿಸದ ಕಾರಣ ಸ್ತಬ್ದಚಿತ್ರ ತಿರಸ್ಕೃತಗೊಂಡಿದೆ ಎಂದು ದೂರಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು