ಶುಕ್ರವಾರ, ಮೇ 29, 2020
27 °C
ಡಿಜಿಟಲ್‌ ತಂತ್ರಜ್ಞಾನ ಬಳಸಿ ಶಿಕ್ಷಣ

‘ಪಿಎಂ–ಇವಿದ್ಯಾ’ ಅಭಿಯಾನ: ಪ್ರತಿ ತರಗತಿಗೂ ಪ್ರತ್ಯೇಕ ಚಾನೆಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

representational image

ನವದೆಹಲಿ:  ಡಿಜಿಟಲ್‌ ಮಾಧ್ಯಮದ ಮೂಲಕ ಶಿಕ್ಷಣ ಪ್ರಸಾರ ಕಾರ್ಯಕ್ಕೆ ಒತ್ತು ನೀಡುವ ಸಂಬಂಧ ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ–ಇ ವಿದ್ಯಾ’ (ಪಿಎಂ–ಇವಿದ್ಯಾ) ಎಂಬ ಕಾರ್ಯಕ್ರಮವನ್ನು ಭಾನುವಾರ ಘೋಷಿಸಿದೆ.

ಈ ಉಪಕ್ರಮದಡಿ 1 ರಿಂದ 12ನೇ ತರಗತಿ ವರೆಗೆ, ಪ್ರತಿ ತರಗತಿಗೂ ಪ್ರತ್ಯೇಕ ಟಿ.ವಿ ಚಾನೆಲ್‌ ಆರಂಭಿಸುವುದಾಗಿ ಪ್ರಕಟಿಸಿದೆ.

ಕೋವಿಡ್‌–19ನಿಂದಾಗಿ ಕುಸಿದಿರುವ ದೇಶದ ಆರ್ಥಿಕತೆಗೆ ಪುನಶ್ಚೇತನ ನೀಡುವ ಸಂಬಂಧ 5ನೇ ಕಂತಿನ ವಿವರಗಳನ್ನು ಪ್ರಕಟಿಸಿದ ಸಂದರ್ಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಮಾಹಿತಿ ನೀಡಿದರು.

‘ಶಿಕ್ಷಣ ಪ್ರಸಾರಕ್ಕಾಗಿ 12 ಚಾನೆಲ್‌ಗಳನ್ನು ಡಿಟಿಎಚ್‌ ಸೇವೆಗೆ ಸೇರ್ಪಡೆ ಮಾಡಲಾಗುವುದು. ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಸಂಬಂಧ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರಿಗೆ  ನೆರವು ನೀಡಲು ಮನೋದರ್ಪಣ ಎಂಬ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ ನೀಡಲಾಗುವುದು’ ಎಂದರು.

‘ಡಿಜಿಟಲ್‌ ಇನ್‌ಫ್ರಾಸ್ಟ್ರಕ್ಚರ್‌ ಫಾರ್‌ ನಾಲೆಜ್‌ ಶೇರಿಂಗ್‌’ (ಡಿಐಕೆಎಸ್‌ಎಚ್‌ಎ– ದೀಕ್ಷಾ) ಎಂಬ ಆ್ಯಪ್‌ಅನ್ನು ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್‌ನಿಂದ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಪಾಠಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು