ರಫೇಲ್ ಒಪ್ಪಂದ: ದರದ ಮಾಹಿತಿ ಸುಪ್ರೀಂಗೆ ನೀಡದಿರಲು ಕೇಂದ್ರ ನಿರ್ಧಾರ?

7
ಹತ್ತು ದಿನಗಳೊಳಗೆ ಸಲ್ಲಿಸುವಂತೆ ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯ

ರಫೇಲ್ ಒಪ್ಪಂದ: ದರದ ಮಾಹಿತಿ ಸುಪ್ರೀಂಗೆ ನೀಡದಿರಲು ಕೇಂದ್ರ ನಿರ್ಧಾರ?

Published:
Updated:

ನವದೆಹಲಿ: ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿದ ದರದ ಮಾಹಿತಿಯನ್ನು ಸುಪ್ರೀಂ ಕೋರ್ಟ್‌ಗೆ ನೀಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ.

ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದ ದರದ ಮಾಹಿತಿಯನ್ನು ಭದ್ರತೆ ಮತ್ತು ಸೇನಾ ಗೋಪ್ಯತೆಯ ಕಾರಣದಿಂದ ನೀಡಲಾಗದು ಎಂದು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲು ಕೇಂದ್ರ ಮುಂದಾಗಿದೆ ಎನ್ನಲಾಗಿದೆ.

ಫ್ರಾನ್ಸ್‌ನಿಂದ ಭಾರತ ಖರೀದಿಸಲಿರುವ 36 ರಫೇಲ್‌ ಯುದ್ಧ ವಿಮಾನಗಳ ದರ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಹತ್ತು ದಿನಗಳೊಳಗೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಬುಧವಾರ ಸೂಚಿಸಿತ್ತು. ರಕ್ಷಣೆಗೆ ಸಂಬಂಧಿಸಿ ಸೂಕ್ಷ್ಮ ಎನಿಸಿಕೊಳ್ಳುವ ಮತ್ತು ಗೋಪ್ಯ ಎಂದು ಪರಿಗಣಿಸಲಾಗುವ ಮಾಹಿತಿಯನ್ನು ಈ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅದನ್ನು ವಕೀಲರಿಗೆ ನೀಡದೇ ಇದ್ದರೂ ಪರವಾಗಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠ ಸೂಚಿಸಿತ್ತು.

ಇದನ್ನೂ ಓದಿ: ರಫೇಲ್‌ ದರ ವಿವರ ಕೊಡಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಬರಹ ಇಷ್ಟವಾಯಿತೆ?

 • 8

  Happy
 • 1

  Amused
 • 1

  Sad
 • 0

  Frustrated
 • 6

  Angry

Comments:

0 comments

Write the first review for this !