ಮುಂಬೈ: ಹಣಕಾಸು ಬಿಕ್ಕಟ್ಟಿನಿಂದ ಈಗಾಗಲೇ ಜೆಟ್ ಏರ್‌ವೇಸ್ ವಿಮಾನಗಳು ಹಾರಾಟ ನಿಲ್ಲಿಸಿವೆ. ಇದರಿಂದ ಸಂಸ್ಥೆಯ ಸಿಬ್ಬಂದಿ ಸಂಕಷ್ಟದಲ್ಲಿ ಸಿಲುಕಿದ್ದು, ಇದೀಗ ಮುಖ್ಯ ಹಣಕಾಸು ಅಧಿಕಾರಿ(ಸಿಎಫ್‌ಒ) ಸಹ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಮಿತ್ ಅಗರ್ವಾಲ್ ಸಿಎಫ್‌ಒ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮಂಗಳವಾರ ಜೆಟ್ ಏರ್‌ವೇಸ್ ಹೇಳಿದೆ. ಮೇ 13ರಿಂದಲೇ ಅನ್ವಯವಾಗುವಂತೆ ರಾಜೀನಾಮೆ ಅಂಗೀಕಾರಗೊಂಡಿದೆ.

’ಸಂಸ್ಥೆಯ ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಿಎಫ್‌ಒ ಅಮಿತ್ ಅಗರ್ವಾಲ್ ಅವರು ವೈಯಕ್ತಿಕ ಕಾರಣಗಳಿಂದಾಗಿ ಮೇ 13ರಿಂದಲೇ ಅನ್ವಯವಾಗುವಂತೆ ಸೇವೆಗೆ ರಾಜೀನಾಮೆ ನೀಡಿದ್ದಾರೆ’ ಎಂದು ಜೆಟ್ ಏರ್‌ವೇಸ್ ಹೇಳಿದೆ.

ಏಪ್ರಿಲ್‌ನಿಂದ ಜೆಟ್ ಏರ್‌ವೇಸ್ ತನ್ನ ಎಲ್ಲ ಕಾರ್ಯಚಾರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.