ಬುಧವಾರ, ಜನವರಿ 22, 2020
22 °C

ಚಂದಾ ಕೊಚ್ಚಾರ್‌, ಇತರರ ₹ 78 ಕೋಟಿ ಆಸ್ತಿ ಜಪ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಐಸಿಐಸಿಐ ಬ್ಯಾಂಕ್‌ ಮಾಜಿ ಅಧ್ಯಕ್ಷೆ ಚಂದಾ ಕೊಚ್ಚಾರ್, ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶುಕ್ರವಾರ ₹ 78 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅನುಸಾರ ಆಸ್ತಿ ಮುಟ್ಟುಗೋಲಿಗೆ ಆದೇಶಿಸಲಾಗಿತ್ತು. ಚಂದಾ ಕೊಚ್ಚಾರ್ ಅವರ ಮುಂಬೈನ ಮನೆ ಮತ್ತು ಕಂಪನಿಗೆ ಸೇರಿದ, ಅವರಿಗೆ ಸಂಬಂಧಿಸಿದ ಆಸ್ತಿಗಳು ಇದರಲ್ಲಿ ಸೇರಿವೆ.

ವಿಡಿಯೊಕಾನ್‌ ಸಮೂಹಕ್ಕೆ ಬ್ಯಾಂಕ್‌ನಿಂದ ಸಾಲ ನೀಡುವ ಮೂಲಕ ಅಕ್ರಮ ಹಣ ವರ್ಗಾವಣೆಗೆ
ನೆರವು ನೀಡಲಾಗಿದೆ ಎಂಬುದಕ್ಕೆ ಸಂಬಂಧಿಸಿ ಚಂದಾ ಮತ್ತು ಅವರ ಪತಿ ದೀಪಕ್‌ ಕೊಚ್ಚಾರ್‌ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆಯನ್ನು ನಡೆಸುತ್ತಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು