ಹೈದರಾಬಾದ್: ಆಂಧ್ರಪ್ರದೇಶ ವಿರೋಧ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಗುರುವಾರ ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿ ಸುರಕ್ಷತೆ ದೃಷ್ಟಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಪ್ರಜಾ ಚೈತನ್ಯ ಯಾತ್ರೆ’ ನಡೆಸಲೆಂದು ವಿಶಾಖಪಟ್ಟಣಕ್ಕೆ ಆಗಮಿಸಿದ ನಾಯ್ಡು ಅವರ ವಿರುದ್ಧ ವಿಮಾನ ನಿಲ್ದಾಣದ ಹೊರಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ತೆಲುಗು ದೇಶಂ ಪಕ್ಷದ ಕಾರ್ಯಕರ್ತರೂ ಸ್ಥಳದಲ್ಲಿ ಜಮಾಯಿಸಿದರು. ಇದರಿಂದ ವಿಮಾನ ನಿಲ್ದಾಣದ ಹೊರಗೆ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಇದೇ ಹಿನ್ನೆಲೆಯಲ್ಲಿ ಪೊಲೀಸರು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಮುನ್ನೆಚ್ಚರಿಕೆ ಹಾಗೂ ಸುರಕ್ಷತೆ ದೃಷ್ಟಿಯಿಂದ ವಶಕ್ಕೆ ಪಡೆದರು. ಅವರನ್ನು ಏರ್ಪೋರ್ಟ್ನ ಲಾಂಜ್ನಲ್ಲೇ ಇರಿಸಿದರು.

‘ಸುರಕ್ಷತೆ ದೃಷ್ಟಿಯಿಂದ ನಾಯ್ಡು ಅವರನ್ನು ಬಂಧಿಸಲಾಗಿದೆ. ಅವರು ಪೊಲೀಸರೊಂದಿಗೆ ಸಹಕರಿಸಿದ್ದಾರೆ,’ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು, ವಿಮಾನ ನಿಲ್ದಾಣದಿಂದ ಹೊರಹೋಗಲು ಅವಕಾಶ ನೀಡದ್ದರ ಕುರಿತು ಮಾತನಾಡಿರುವ ಚಂದ್ರಬಾಬು ನಾಯ್ಡು, ‘ ಸರ್ಕಾರ ಉದ್ದೇಶಪೂರ್ವಕವಾಗಿ ನನ್ನನ್ನು ಬಂಧಿಸಿದೆ,’ ಎಂದು ಆರೋಪಿಸಿದರು. ಅಲ್ಲದೆ, ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ವಿರುದ್ಧ ಹರಿಹಾಯ್ದರು.

ಇದೇ ಜಾಗದಲ್ಲಿ, ಇದೇ ಪರಿಸ್ಥಿತಿ ಅನುಭವಿಸಿದ್ದ ಜಗನ್

ಮೂರು ವರ್ಷಗಳ ಹಿಂದೆ ಜಗನ್ ಮೋಹನ್ ರೆಡ್ಡಿ ಅವರೂ ಇದೇ ವಿಮಾನ ನಿಲ್ದಾಣದಲ್ಲಿ ಇಂಥದ್ದೇ ಪರಿಸ್ಥಿತಿ ಅನುಭವಿಸಿದ್ದರು. 2017ರಲ್ಲಿ ವಿಶಾಖಪಟ್ಟಣಕ್ಕೆ ಆಗಮಿಸಿದ್ದ ಜಗನ್ ಅವರನ್ನು ಅಂದು ಪೊಲೀಸರುಹೊರ ಹೋಗಲು ಬಿಟ್ಟಿರಲಿಲ್ಲ. ಅಂದು ಜಗನ್ ಕೂಡ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇಂದು ಚಂದ್ರಬಾಬು ನಾಯ್ಡು ಅವರನ್ನುವಿಮಾನ ನಿಲ್ದಾಣದಿಂದ ಹೊರಹೋಗಲು ಬಿಡದ ಈ ಪ್ರಸಂಗ ಇತಿಹಾಸವನ್ನು ನೆನಪಿಸುವಂತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.