ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರನ ಕಕ್ಷೆ ಸೇರಿದ ಚಂದ್ರಯಾನ–2

Last Updated 20 ಆಗಸ್ಟ್ 2019, 7:30 IST
ಅಕ್ಷರ ಗಾತ್ರ

ಬೆಂಗಳೂರು: ಚಂದ್ರಯಾನ–2 ನೌಕೆಯು ಮಂಗಳವಾರ ಬೆಳಿಗ್ಗೆ ಚಂದ್ರನ ಇನ್ನಷ್ಟು ಸನಿಹಕ್ಕೆ ಸರಿದಿದ್ದು, ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೊ) ಚಂದ್ರಯಾನ ಯೋಜನೆಯಲ್ಲಿ ಇದೊಂದು ಮಹತ್ವದ ಮೈಲುಗಲ್ಲು ಎನಿಸಿದೆ.

30 ದಿನಗಳ ನಂತರ ನೌಕೆಯನ್ನು ಭೂಮಿಯ ಕಕ್ಷೆಯಿಂದ ಚಂದ್ರನ ಕಕ್ಷೆಗೆ ಏರಿಸುವ ಕೆಲಸ ಬೆಳಿಗ್ಗೆ 9:02ಕ್ಕೆ ಯಶಸ್ವಿಯಾಗಿ ನಡೆದಿದೆ ಇಸ್ರೋ ತಿಳಿಸಿದೆ.

ವಿಕ್ರಮ್‌ ಲ್ಯಾಂಡರ್‌ ಸೆ. 2ರಂದು ನೌಕೆಯಿಂದ ಬೇರ್ಪಡಲಿದ್ದು, ಸೆ. 7ರಂದು ಚಂದ್ರನ ಅಂಗಳಕ್ಕೆ ಇಳಿಯಲಿದೆ. ಇದನ್ನು ಎರಡು ಕಾರ್ಯಾಚರಣೆಗಳ ಮೂಲಕ ಇಳಿಸಲಾಗುವುದು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಚಂದ್ರಯಾನ–2 ಚಂದ್ರನಿಗೆ ಸಂಬಂಧಿಸಿ ಇಸ್ರೊ ಕೈಗೆತ್ತಿಕೊಂಡಿರುವ ಎರಡನೇ ಯೋಜನೆ ಇದಾಗಿದೆ. ಈವರೆಗೆ ಯಾರೂ ಶೋಧಿಸದ ಚಂದ್ರನ ದಕ್ಷಿಣ ಧ್ರುವದ ಬಗ್ಗೆ ಚಂದ್ರಯಾನ–2 ಅಧ್ಯಯನ ನಡೆಸಲಿದೆ.

ಇನ್ನಷ್ಟು..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT