ತಮಿಳುನಾಡಿನಲ್ಲಿ ವಿಶ್ವದರ್ಜೆಯ ಯೋಗ, ಪ್ರಕೃತಿಚಿಕಿತ್ಸೆ ಆಸ್ಪತ್ರೆ ನಿರ್ಮಾಣ

7
ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಘೋಷಣೆ

ತಮಿಳುನಾಡಿನಲ್ಲಿ ವಿಶ್ವದರ್ಜೆಯ ಯೋಗ, ಪ್ರಕೃತಿಚಿಕಿತ್ಸೆ ಆಸ್ಪತ್ರೆ ನಿರ್ಮಾಣ

Published:
Updated:

ಚೆನ್ನೈ : ‘₹ 60 ಕೋಟಿ ವೆಚ್ಚದಲ್ಲಿ ವಿಶ್ವದರ್ಜೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯನ್ನು ತಮಿಳುನಾಡಿನಲ್ಲಿ ನಿರ್ಮಿಸಲಾಗುತ್ತದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಘೋಷಿಸಿದ್ದಾರೆ.

‘ಜೀವನಶೈಲಿ ಬದಲಾಗುತ್ತಿರುವ ಈಗಿನ ಕಾಲಘಟ್ಟದಲ್ಲಿ ಯೋಗ ಮತ್ತು ಪ್ರಕೃತಿಚಿಕಿತ್ಸೆಯಿಂದ ದೇಹದ ಆರೋಗ್ಯ ಕಾಪಾಡಿಕೊಳ್ಳಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಚೆಂಗಲ್‌ಪೇಟ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಹೊಸ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ’ ಎಂದು ಅವರು ತಿಳಿಸಿದರು.

‘ಆಸ್ಪತ್ರೆಆವರಣದಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವ್ಯವಸ್ಥೆ, ಉದ್ಯೋಗಿಗಳಿಗೆ ವಸತಿ ವ್ಯವಸ್ಥೆ ಇರುತ್ತದೆ. ಕಾಲೇಜಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಜೊತೆಗ ಸಂಶೋಧನೆಗೂ ಅವಕಾಶ ಮಾಡಿಕೊಡಲಾಗುತ್ತದೆ. ಪ್ರಕೃತಿ ಚಿಕಿತ್ಸೆ ಜೊತೆಗೆ ಹರ್ಬಲ್‌ ಮ್ಯಾಗ್ನೆಟ್‌, ಜಲಚಿಕಿತ್ಸೆ, ಆಕ್ಯುಪಂಕ್ಚರ್‌  ಚಿಕಿತ್ಸೆ ವ್ಯವಸ್ಥೆ ಇರಲಿದೆ’ ಎಂದು ಅವರು ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !