ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆನ್ನೈ: ಮೀನುಗಾರರ ಬಿಡುಗಡೆಗೆ ಕೇಂದ್ರಕ್ಕೆ ಮನವಿ

Last Updated 26 ಫೆಬ್ರುವರಿ 2019, 19:24 IST
ಅಕ್ಷರ ಗಾತ್ರ

ಚೆನ್ನೈ: ಕಳೆದ ತಿಂಗಳು ಇರಾನ್‌ನಲ್ಲಿ ಬಂಧನಕ್ಕೊಳಗಾಗಿರುವ ಮೂವರು ಮೀನುಗಾರರ ಬಿಡುಗಡೆಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ತಮಿಳುನಾಡು ಸರ್ಕಾರ ಮನವಿ ಮಾಡಿದೆ.

ಈ ಕುರಿತು ಮುಖ್ಯಮಂತ್ರಿ ಪಳನಿಸ್ವಾಮಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಪತ್ರ ಬರೆದಿದ್ದಾರೆ.

ಕನ್ಯಾಕುಮಾರಿ ಜಿಲ್ಲೆಯವರಾದ ಈ ಮೂವರು ಸೌದಿ ಅರೇಬಿಯಾ ಒಡೆತನದ ಹಡಗಿನಲ್ಲಿ ಮೀನುಗಾರರಾಗಿದ್ದರು. ಕಳೆದ ಜನವರಿ 2ರಂದು ಥರೈನ್‌ ಮೀನುಗಾರಿಕ ನೆಲೆಯಲ್ಲಿ ಇವರನ್ನು ಅಪಹರಿಸಲಾಗಿತ್ತು. ಜ.7ರಂದು ಇರಾನ್‌ನಲ್ಲಿ ಪತ್ತೆಯಾದ ಇವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸೌದಿ ಅರೇಬಿಯಾ ಮತ್ತು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಕೂಡಲೇ ಮುಗ್ಧ ಮೀನುಗಾರರ ಬಿಡುಗಡೆಗೆ ಪ್ರಯತ್ನಿಸಬೇಕೆಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT