ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡ ವಿಧಾನಸಭೆ ಚುನಾವಣೆ: ಇಂದು ಎರಡನೇ ಹಂತದ ಮತದಾನ

Last Updated 20 ನವೆಂಬರ್ 2018, 1:43 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸಗಡ ವಿಧಾನಸಭೆಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಲಿದ್ದು,72 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಇಂದು ಮತಯಂತ್ರ ಸೇರಲಿದೆ.

ಒಟ್ಟು 1.54 ಕೋಟಿ ಮತದಾರರಿದ್ದು, ಈ ಪೈಕಿ 77.35 ಲಕ್ಷ ಪುರುಷರು ಹಾಗೂ 76.46 ಲಕ್ಷ ಮಹಿಳೆಯರಿದ್ದಾರೆ. 877 ಲೈಂಗಿಕ ಅಲ್ಪಸಂಖ್ಯಾತರಿದ್ದಾರೆ. 19,336 ಮತಗಟ್ಟೆಗಳಿದ್ದು, ಈ ಪೈಕಿ ಎರಡರಲ್ಲಿ ಬೆಳಿಗ್ಗೆ 7ರಿಂದ ಮಧ್ಯಾಹ್ನ 3ರ ವರೆಗೆ ಮತದಾನ ನಡೆಯಲಿದೆ. ಉಳಿದ ಮತಗಟ್ಟೆಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ ಎಂದು ಛತ್ತೀಸಗಡದ ಮುಖ್ಯ ಚುನಾವಣಾ ಆಯುಕ್ತ ಸುಬ್ರತ್ ಸಾಹು ಮಾಹಿತಿ ನೀಡಿದ್ದಾರೆ.

ಬಿಗಿ ಭದ್ರತೆ: ಮತದಾನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುರ್ಗುಜಾದ ಅಂಬಿಕಾಪುರದಲ್ಲಿ ಅಣಕು ಮತದಾನ ಮಾಡುವ ಮೂಲಕ ಮತದಾನ ಪ್ರಕ್ರಿಯೆಗೆ ಪೂರ್ವತಯಾರಿ ನಡೆಸಲಾಗಿದೆ.

ರಾಜ್ಯದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿದ್ದು, ಈ ಪೈಕಿ 18 ಕ್ಷೇತ್ರಗಳಿಗೆ ಇದೇ 12ರಂದು‌ ಚುನಾವಣೆ ನಡೆದಿತ್ತು. ಮೊದಲ ಹಂತದಲ್ಲಿ ಶೇ 70ರಷ್ಟು ಮತದಾನವಾಗಿದೆ.ನಕ್ಸಲರ ಪ್ರಾಬಲ್ಯವಿರುವ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಹತರಾಗಿದ್ದರು. ಕೋಬ್ರಾ ಬೆಟಾಲಿಯನ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದರು. ಈ ಎರಡು ಘಟನೆಗಳನ್ನು ಹೊರತುಪಡಿಸಿ ಉಳಿದ ಕಡೆ ಮತದಾನ ಶಾಂತಿಯುತವಾಗಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT