ರಾಯಪುರ್ (ಛತ್ತೀಸಗಢ): ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಛತ್ತೀಸಗಡದ ಬಿಲಾಸ್‌ಪುರ ಜಿಲ್ಲೆಯಲ್ಲಿ ಗರ್ಭಿಣಿಯರಿಗಾಗಿ ಪ್ರತ್ಯೇಕ ಕ್ವಾರಂಟೈನ್ ಕೇಂದ್ರ ಆರಂಭಿಸಲಾಗಿದೆ ಎಂದು ಭಾನುವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ರಾಯ್‌ಪುರದಿಂದ ಸುಮಾರು 120 ಕಿ.ಮೀ. ದೂರದಲ್ಲಿರುವ ಬಿಲಾಸ್‌ಪುರ ಜಿಲ್ಲೆಯ ಕೆಸ್ಲಾ ಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ. ಲಾಕ್‌ಡೌನ್‌ನಿಂದಾಗಿ ವಿವಿಧ ರಾಜ್ಯಗಳಿಂದ ವಲಸೆ ಕಾರ್ಮಿಕರು ಮರಳಿ ಬಂದಿದ್ದು, ಅದರಲ್ಲಿ ಎಂಟು ಗರ್ಭಿಣಿಯರನ್ನು ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿದೆ’ ಎಂದು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ಮುಖ್ಯಮಂತ್ರಿ ಭೂಪೇಶ್ ಬಘೇಲ ಅವರ ಸೂಚನೆಯ ಮೇರೆಗೆ ಗರ್ಭಿಣಿಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ. ಪೌಷ್ಟಿಕ ಆಹಾರ, ಸ್ಕ್ರೀನಿಂಗ್ ಸೌಲಭ್ಯಗಳು ಮತ್ತು ರಕ್ಷಣಾತ್ಮಕ ಸಾಧನಗಳು ಕೇಂದ್ರದಲ್ಲಿವೆ. ಇವುಗಳನ್ನು ದಿನಕ್ಕೆ ಮೂರು ಬಾರಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಕೇಂದ್ರದಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಗಳ ಕಾಲ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಛತ್ತೀಸಗಡದಲ್ಲಿ ಶನಿವಾರದ ಹೊತ್ತಿಗೆ 2,31,536 ಮಂದಿಯಲ್ಲಿ (ಇವರಲ್ಲಿ ಬಹುತೇಕರು ವಲಸೆ ಕಾರ್ಮಿಕರು)19,732 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. 52,997 ಜನರನ್ನು ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿರಿಸಲಾಗಿದೆ.

ಛತ್ತಿಸಗಡದಲ್ಲಿ ಇದುವರೆಗೆ 997 ಕೋವಿಡ್–19 ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 734 ಪ್ರಕರಣಗಳು ಸಕ್ರಿಯವಾಗಿದ್ದು, 259 ಮಂದಿ ಗುಣಮುಖರಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.