ಆಯ್ದ ಉದ್ಯಮಿಗಳ ₹3.5 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ: ರಾಹುಲ್ ಗಾಂಧಿ ಆರೋಪ

7
ಛತ್ತೀಸ್‌ಗಡ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ವಿರುದ್ಧ ವಾಗ್ದಾಳಿ

ಆಯ್ದ ಉದ್ಯಮಿಗಳ ₹3.5 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ: ರಾಹುಲ್ ಗಾಂಧಿ ಆರೋಪ

Published:
Updated:

ರಾಯ್‌ಪುರ: ಪ್ರಧಾನಿ ನರೇಂದ್ರ ಮೋದಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಆಯ್ದ 15 ಕೈಗಾರಿಕೋದ್ಯಮಿಗಳ ₹3.5 ಲಕ್ಷ ಕೋಟಿ ಮೊತ್ತದ ಸಾಲ ಮನ್ನಾ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.

ವಿಧಾನಸಭೆ ಚುನಾವಣೆಗೆ ಇನ್ನೆರಡೇ ದಿನ ಬಾಕಿ ಇರುವಾಗ ಛತ್ತೀಸ್‌ಗಡದ ಕಾನ್‌ಕೇರ್ ಜಿಲ್ಲೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಗಾ ಯೋಜನೆಗೆ ವಾರ್ಷಿಕ ₹35 ಸಾವಿರ ಕೋಟಿ ಅಗತ್ಯವಿದೆ. ಹೀಗಿರುವಾಗ ಮೋದಿ ಅವರು ಇದಕ್ಕಿಂತ ಹತ್ತು ಪಟ್ಟು ಹೆಚ್ಚು ಮೊತ್ತದ ಸಾಲ ಮನ್ನಾ ಮಾಡಿದ್ದಾರೆ’ ಎಂದು ದೂರಿದ್ದಾರೆ.

ರಾಜ್ಯದ ಬೊಕ್ಕಸದ ಕೀಲಿಕೈಯನ್ನು ರೈತರು, ಬಡವರು, ಯುವಕರು, ಮಹಿಳೆಯರು ಮತ್ತು ಬುಡಕಟ್ಟು ಜನರಿಗೆ ನೀಡಿ ಛತ್ತೀಸ್‌ಗಡವನ್ನು ಐದು ವರ್ಷಗಳಲ್ಲಿ ಕೃಷಿಯ ಕೇಂದ್ರವನ್ನಾಗಿ ಮಾಡಲು ಬಯಸಿರುವುದಾಗಿಯೂ ರಾಹುಲ್ ಗಾಂಧಿ ಹೇಳಿದ್ದಾರೆ.

ಮುಖ್ಯಮಂತ್ರಿ ರಮಣ್‌ ಸಿಂಗ್ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಬೃಹತ್ ರ್‍ಯಾಲಿ ನಡೆಸಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದರು.

ರಾಜ್ಯದಲ್ಲಿ ಇದೇ 12 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್‌ 11ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 1

  Frustrated
 • 4

  Angry

Comments:

0 comments

Write the first review for this !