ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ: ಪಿ.ಚಿದಂಬರಂ ಸಿಬಿಐ ವಶಕ್ಕೆ

Last Updated 22 ಆಗಸ್ಟ್ 2019, 13:19 IST
ಅಕ್ಷರ ಗಾತ್ರ

ನವದೆಹಲಿ:ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆಬಂಧಿಸಲಾಗಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ನ್ಯಾಯಾಲಯ ಸಿಬಿಐ ವಶಕ್ಕೆ ಒಪ್ಪಿಸಿದೆ.

ಸಿಬಿಐ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಚಿದಂಬರಂ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಒಪ್ಪಿಸಬೇಕು ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು.

ಆಗಸ್ಟ್‌ 26ರ ವರೆಗೂ ನ್ಯಾಯಾಲಯ ಸಿಬಿಐ ವಶಕ್ಕೆ ನೀಡಿದೆ. ಪಿ.ಚಿದಂಬರಂ ಪರ ವಕೀಲರು ಮತ್ತು ಅವರ ಕುಟುಂಬದವರ ಭೇಟಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿದೆ.

‘ಚಿದಂಬರಂ ಅವರು ವಿಚಾರಣೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಬೇಕು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿಚಿದಂಬರಂ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

‘ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಸಿಬಿಐ ಕೇಳಿದ ಪ‍್ರಶ್ನೆಗಳಿಗೆ ಉತ್ತರಿಸಿದ್ದಾರೆ.ಕೆಲವು ಪ‍್ರಶ್ನೆಗಳಿಗೆ ಉತ್ತರಿಸಿಲ್ಲ ಎಂದ ಮಾತ್ರಕ್ಕೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದರ್ಥವಲ್ಲ’ ಎಂದುಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT