ಗುರುವಾರ , ಡಿಸೆಂಬರ್ 5, 2019
22 °C
ಐಎನ್‌ಎಕ್ಸ್‌ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣ

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಚಿದಂಬರಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸೋಮವಾರವಷ್ಟೇ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಎಸ್‌.ಎ.ಬೊಬಡೆ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.

ಕಳೆದ 90 ದಿನದಿಂದ ಚಿದಂಬರಂ ಅವರು ಜೈಲಿನಲ್ಲಿದ್ದು, ಇವರು ಸಲ್ಲಿಸಿರುವ ಅರ್ಜಿ ಮಂಗಳವಾರ ಅಥವಾ ಬುಧವಾರ ವಿಚಾರಣೆಗೆ ಬರಲಿದೆ ಎಂದು ಹಿರಿಯ ವಕೀಲ ಕಪಿಲ್‌ ಸಿಬಲ್‌ ತಿಳಿಸಿದ್ದಾರೆ. ‘ಚಿದಂಬರಂ ಅವರ ಮೇಲಿರುವ ಆರೋಪಗಳು ಗಂಭೀರವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ದೆಹಲಿ ಹೈಕೋರ್ಟ್‌, ಚಿದಂಬರಂ ಜಾಮೀನು ಅರ್ಜಿಯನ್ನು ಕಳೆದ ಶುಕ್ರವಾರ ದೆಹಲಿ ಹೈಕೋರ್ಟ್‌ ತಿರಸ್ಕರಿಸಿತ್ತು. 

 

ಪ್ರತಿಕ್ರಿಯಿಸಿ (+)