ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಡಾಖ್ ಗಡಿ ಘರ್ಷಣೆ ನಂತರ 10 ಭಾರತೀಯ ಯೋಧರನ್ನು ಬಿಡುಗಡೆ ಮಾಡಿದ ಚೀನಾ

Last Updated 19 ಜೂನ್ 2020, 3:37 IST
ಅಕ್ಷರ ಗಾತ್ರ

ನವದೆಹಲಿ: ಲಡಾಖ್‌ನ ಗಾಲ್ವನ್ ಕಣಿವೆ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ವಶಕ್ಕೆ ಪಡೆದಿದ್ದ ಇಬ್ಬರು ಮೇಜರ್‌ಗಳು ಸೇರಿದಂತೆ 10 ಭಾರತೀಯ ಯೋಧರನ್ನು ಚೀನಾ ಬಿಡುಗಡೆ ಮಾಡಿದೆ ಎಂದು ಶುಕ್ರವಾರ ಮಾಧ್ಯಮ ವರದಿಗಳು ತಿಳಿಸಿವೆ.

ಸೋಮವಾರ ನಡೆದ ಘರ್ಷಣೆ ಬಳಿಕ ಉದ್ವಿಗ್ನತೆಯನ್ನು ಕಡಿಮೆಗೊಳಿಸುವ ಪ್ರಯತ್ನದಲ್ಲಿ ಎರಡು ದೇಶಗಳ ನಡುವೆ ಹಲವಾರು ಸುತ್ತಿನ ಮಾತುಕತೆ ನಡೆದ ಬಳಿಕ ಚೀನಾ ಭಾರತೀಯ ಯೋಧರನ್ನು ಬಿಡುಗಡೆ ಮಾಡಿದೆ.

ಗುರುವಾರ ತಡವಾಗಿ ಭಾರತದ 10 ಸೈನಿಕರನ್ನು ಚೀನಾ ಬಿಡುಗಡೆ ಮಾಡಿದೆ ಎಂದು ಪಿಟಿಐ ಸುದ್ದಿಸಂಸ್ಥೆ ಮತ್ತು ಇತರ ಮಾಧ್ಯಮಗಳು ವರದಿ ಮಾಡಿವೆ.

ಲಡಾಖ್‌ನ ಗಾಲ್ವನ್ ವ್ಯಾಲಿ ಪ್ರದೇಶದಲ್ಲಿ ನಡೆದ ಉಭಯ ಸೇನೆಗಳ ನಡುವೆ ನಡೆದ ಹೋರಾಟದ ನಂತರ ಭಾರತ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಸೇನೆಯು ಹೇಳಿಕೆಯನ್ನು ಬಿಡುಗಡೆ ಮಾಡಿ, 'ಘರ್ಷಣೆಯಲ್ಲಿ ಯಾವುದೇ ಭಾರತೀಯ ಯೋಧರು ಕಾಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಚೀನಾದ ಸರಕುಗಳನ್ನು ಬಹಿಷ್ಕರಿಸುವ ಘೋಷಣೆಗಳ ಮಧ್ಯೆ, ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಸೈನಿಕರ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಪಾಲ್ಗೊಂಡರು. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಚೀನಾದ ಧ್ವಜಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT