ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ 35 ಯೋಧರಿಗೆ ಸಾವು ನೋವು; ಅಮೆರಿಕ ಗುಪ್ತಚರ ಮಾಹಿತಿ

Last Updated 17 ಜೂನ್ 2020, 9:35 IST
ಅಕ್ಷರ ಗಾತ್ರ

ನವದೆಹಲಿ: ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಭಾರತದ ಯೋಧರ ಜತೆಗಿನ ಚಕಮಕಿಯಲ್ಲಿ ಚೀನಾದ 35 ಯೋಧರು ಮೃತಪಟ್ಟಿದ್ದಾರೆ ಅಥವಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಮೆರಿಕದ ಗುಪ್ತಚರ ಮಾಹಿತಿ ಆಧರಿಸಿ ಸರ್ಕಾರದ ಮೂಲಗಳು ತಿಳಿಸಿವೆ.

ಆದರೆ ಎಷ್ಟು ಸೈನಿಕರಿಗೆ ಸಾವು ನೋವು ಸಂಭವಿಸಿದೆ ಎಂಬ ಬಗ್ಗೆ ಚೀನಾ ಈವರೆಗೆ ಮಾತನಾಡಿಲ್ಲ.

ಸೋಮವಾರ ರಾತ್ರಿ ನಡೆದ ಕಾಳಗದಲ್ಲಿ ದೇಶದ 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಮಂಗಳವಾರ ಹೇಳಿಕೆ ನೀಡಿದ್ದರು. ಭಾರತದಷ್ಟೇ ಚೀನಾ ಕಡೆಯಲ್ಲೂ ಸಾವುನೋವು ಸಂಭವಿಸಿರಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಮಂಗಳವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್. ಜೈಶಂಕರ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಜೊತೆ ಸಭೆ ನಡೆಸಿ, ಪರಿಸ್ಥಿತಿ ಅವಲೋಕಿಸಿದ್ದರು. ಘಟನೆಯಲ್ಲಿ ಭಾರತದ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT