ಶುಕ್ರವಾರ, ಸೆಪ್ಟೆಂಬರ್ 17, 2021
29 °C

ಬಿಜೆಪಿ ನಾಯಕ ಚಿನ್ಮಯಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ವಿದ್ಯಾರ್ಥಿನಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ 23ರ ಹರೆಯದ ಕಾನೂನು ವಿದ್ಯಾರ್ಥಿನಿಯನ್ನು ಬುಧವಾರ ಬಂಧಿಸಲಾಗಿದೆ.

ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತಂಡವು ವಿದ್ಯಾರ್ಥಿನಿ ಮೇಲೆ ಹಣ ಸುಲಿಗೆ ಆರೋಪ ಹೊರಿಸಿ ಬಂಧಿಸಿದೆ. ಬಂಧನವನ್ನು ಪ್ರಶ್ನಿಸಿ  ವಿದ್ಯಾರ್ಥಿನಿ ಸ್ಥಳೀಯ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರೂ ಪ್ರಯೋಜನವಾಗಲಿಲ್ಲ. ಪ್ರಕರಣದ ವಿಚಾರಣೆ ಬುಧವಾರ ನಡೆಯಲಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಬಂಧನ

ವಿದ್ಯಾರ್ಥಿನಿಯನ್ನು ಮನೆಯಿಂದಲೇ ಬಂಧಿಸಿದ್ದು, ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಇದಾದನಂತರ ಆಕೆಯನ್ನು ಮೆಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ವಿಶೇಷ ತನಿಖಾ ತಂಡದ ಐಜಿಪಿ ನವೀನ್ ಅರೋರಾ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕಳೆದ ವಾರ ಉತ್ತರಪ್ರದೇಶ ಪೊಲೀಸ್‌ ಇಲಾಖೆಯ ವಿಶೇಷ ತನಿಖಾ ತಂಡದವರು (ಎಸ್‌ಐಟಿ) ಶಹಜಹಾನ್‌ಪುರದಲ್ಲಿರುವ ಆಶ್ರಮದಿಂದ ಚಿನ್ಮಯಾನಂದ ಅವರನ್ನು ಬಂಧಿಸಿತ್ತು. ಇದಾದ ನಂತರ ಚಿನ್ಮಯಾನಂದ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ‘ಆರೋಪಿಸಿದವರು ವಿಷಕನ್ಯೆಯರು’

ಈ ರೀತಿ ಬಂಧನಕ್ಕೊಳಗಾದ ಆರೋಪಿ ಸಂಜಯ್ ಸಿಂಗ್ ಜತೆ ಕಾನೂನು ವಿದ್ಯಾರ್ಥಿನಿ ನಿರಂತರ  ಸಂಪರ್ಕ ಹೊಂದಿದ್ದಾಳೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಇವರಿಬ್ಬರ ನಡುವೆ 4,200 ಫೋನ್ ಕರೆಗಳು ದಾಖಲಾಗಿವೆ ಎಂದು ವಿಶೇಷ ತಂಡ ಹೇಳಿದೆ.

ಇದನ್ನೂ ಓದಿ: ಸಂತ್ರಸ್ತ ಯುವತಿಗೆ ‘ಸುಪ್ರೀಂ’ ಅಭಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು