ಶುಕ್ರವಾರ, ಏಪ್ರಿಲ್ 3, 2020
19 °C

ರಾಜೀವ್‌ ಕುಮಾರ್‌ ವಿಚಾರಣೆಗೆ ಸಾಕ್ಷ್ಯ ಮಂಡಿಸಲು ‘ಸುಪ್ರೀಂ’ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಶಾರದಾ ಚಿಟ್‌ ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ, ಕೋಲ್ಕತ್ತ ಪೊಲೀಸ್ ಕಮಿಷನರ್‌ ರಾಜೀವ್‌ ಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಾಕ್ಷ್ಯಗಳನ್ನು ಮಂಡಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಸೂಚಿಸಿದೆ. 

ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ಪ್ರಕರಣದ ವಿಚಾರಣೆ ನಡೆಸಿತು. 

ರಾಜೀವ್‌ ಕುಮಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ನಾಶಗೊಳಿಸಿದ್ದಾರೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುವಂತೆ ‌‌ಸಿಬಿಐ ಪರವಾಗಿ ಹಾಜರಾಗಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಪೀಠ ಆದೇಶಿಸಿತು. 

ಬುಧವಾರದೊಳಗೆ ರಾಜೀವ್‌ ಕುಮಾರ್‌ ವಿರುದ್ಧ ಸಾಕ್ಷಿ ಸಲ್ಲಿಸುವುದಾಗಿ ಮೆಹ್ತಾ ತಿಳಿಸಿದರು. ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಯಿತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು