‘ಶಾರೆದಾ ಚಿಟ್‌ಫಂಡ್‌ ಹಗರಣ: ಅಧಿಕಾರಿಗಳು ಖುದ್ದು ಹಾಜರಾಗದೆ ತೀರ್ಪು ನೀಡಲ್ಲ’

ಬುಧವಾರ, ಮೇ 22, 2019
27 °C

‘ಶಾರೆದಾ ಚಿಟ್‌ಫಂಡ್‌ ಹಗರಣ: ಅಧಿಕಾರಿಗಳು ಖುದ್ದು ಹಾಜರಾಗದೆ ತೀರ್ಪು ನೀಡಲ್ಲ’

Published:
Updated:

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಹಾಗೂ ಕೋಲ್ಕತ್ತ ಪೊಲೀಸ್‌ ಕಮಿಷನರ್‌ ಈ ಮೂವರೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗದೆ ಶಾರದಾ ಚಿಟ್‌ಫಂಡ್‌ ಹಗರಣದ ವಿಚಾರಣೆ ಸಂಬಂಧ ಯಾವುದೇ ತೀರ್ಪು ನೀಡದಿರಲು ಸುಪ್ರೀಂಕೋರ್ಟ್‌ ಮಂಗಳವಾರ ನಿರ್ಧರಿಸಿದೆ.

‘ನಾವು ಯಾವುದೇ ತೀರ್ಪು ನೀಡುವುದಿಲ್ಲ. ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳುತ್ತೇವೆ’ ಎಂದು ನ್ಯಾಯಮೂರ್ತಿಗಳಾದ ಎಲ್‌.ಎನ್‌.ರಾವ್‌ ಮತ್ತು ಸಂಜೀವ್‌ ಖನ್ನಾ ಅವರನ್ನು ಒಳಗೊಂಡಿರುವ ನ್ಯಾಯಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರ ನೇತೃತ್ವದ ಪೀಠದ ಮುಂದೆ ಈ ಪ್ರಕರಣವು ಬುಧವಾರ ವಿಚಾರಣೆಗೆ ಬರಲಿದೆ.

ಫೆಬ್ರುವರಿ 5ರಂದು ನೀಡಿದ ಆದೇಶದಲ್ಲಿ ಸುಪ್ರೀಂ ಕೋರ್ಟ್‌, ಪ್ರಕರಣವು ತೀರ್ಪು ನೀಡುವ ಪಟ್ಟಿಯಲ್ಲಿದೆ. ಅದಕ್ಕೂ ಮೊದಲು ಮುಖ್ಯಕಾರ್ಯದರ್ಶಿ ಮಲಯ್‌ ಕುಮಾರ್‌ ದೇ, ಡಿಜಿಪಿ ವೀರೇಂದ್ರ ಕುಮಾರ್‌ ಮತ್ತು ಕೋಲ್ಕತ್ತಾ ಪೊಲೀಸ್ ಕಮಿಷನರ್‌ ರಾಜೀವ್‌ ಕುಮಾರ್‌ ಇದೇ ಫೆಬ್ರುವರಿ 20ಕ್ಕೂ ಮೊದಲು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಸೂಚಿಸಿತ್ತು. ಈ ಮೂವರೂ ಸೋಮವಾರವಷ್ಟೇ ನ್ಯಾಯಾಲಯಕ್ಕೆ ಖುದ್ದು ಹಾಜರಿ ಬಗ್ಗೆ ಅಫಿಡವಿಟ್‌ ಸಲ್ಲಿಸಿದ್ದರು.

ಶಾರದಾ ಚಿಟ್‌ಫಂಡ್‌ ಹಗರಣದಲ್ಲಿ ಈ ಮೂವರು ಅಧಿಕಾರಿಗಳು ಸಿಬಿಐ ತನಿಖೆಗೆ ತಡೆಯೊಡ್ಡಿದ್ದಾರೆ. ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ನಾಶಗೊಳಿಸಿದ್ದಾರೆ ಎಂದು ಸಿಬಿಐ ಮಾಡಿರುವ ಆರೋಪದ ಮೇಲೆ ಮೂವರಿಗೂ ಫೆ.5ರಂದು ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ನೀಡಿದೆ.

**

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಹಾಗೂ ಕೋಲ್ಕತ್ತ ಪೊಲೀಸ್‌ ಕಮಿಷನರ್‌ ಈ ಮೂವರೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗದೆ ಶಾರದಾ ಚಿಟ್‌ಫಂಡ್‌ ಹಗರಣದ ವಿಚಾರಣೆ ಸಂಬಂಧ ಯಾವುದೇ ತೀರ್ಪು ನೀಡದಿರಲು ಸುಪ್ರೀಂಕೋರ್ಟ್‌ ಮಂಗಳವಾರ ನಿರ್ಧರಿಸಿದೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !