ಶುಕ್ರವಾರ, ನವೆಂಬರ್ 22, 2019
22 °C

ರತುಲ್‌ ಪುರಿ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಕೆ

Published:
Updated:

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಸೋದರಳಿಯ ರತುಲ್‌ ಪುರಿ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯದಲ್ಲಿ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ. 

ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರ ಮುಂದೆ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

ಸೆಪ್ಟೆಂಬರ್ 4 ರಂದು ಪುರಿಯನ್ನು ಬಂಧಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರತಿಕ್ರಿಯಿಸಿ (+)