ಮಂಗಳವಾರ, ಮಾರ್ಚ್ 31, 2020
19 °C

ಹತ್ಯೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಸೆಂಗರ್‌ಗೆ 10 ವರ್ಷ ಜೈಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆಯ ಹತ್ಯೆ ಪ್ರಕರಣದ ತಪ್ಪಿತಸ್ಥ, ಉಚ್ಚಾಟಿತ ಬಿಜೆಪಿ ಶಾಸಕ ಕುಲ್‌ದೀಪ್‌ ಸೆಂಗರ್‌ಗೆ ದೆಹಲಿ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ನೀಡಿದೆ.

2017ರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಸೆಂಗರ್‌ ಪ್ರಸಕ್ತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ.

ಸೆಂಗರ್‌ ಹಾಗೂ ಪ್ರಕರಣದ ಸಹ ಆರೋಪಿ, ಆತನ ಸಹೋದರ ಅತುಲ್‌ ಸೆಂಗರ್‌ ಸಂತ್ರಸ್ತೆಯ ಕುಟುಂಬಕ್ಕೆ ತಲಾ ₹ 10 ಲಕ್ಷ ಪರಿಹಾರ ನೀಡಬೇಕು ಎಂದು ದೆಹಲಿ ಜಿಲ್ಲಾ ನ್ಯಾಯಾಧೀಶ ಧರ್ಮೇಶ್‌ ಶರ್ಮಾ ಅವರು ತೀರ್ಪು ನೀಡಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯ ಕಾರಣದಿಂದ ಒಬ್ಬ ಕಾನ್‌ಸ್ಟೆಬಲ್‌ ಸೇರಿದಂತೆ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

ಸಂತ್ರಸ್ತೆಯ ತಂದೆಯ ಮೇಲೆ ಆರೋಪಿಗಳು ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರು 2018ರ ಏಪ್ರಿಲ್‌ 9ರಂದು ನ್ಯಾಯಾಂಗ ಬಂಧನದಲ್ಲಿದ್ದಾಗಲೇ ಸಾವನ್ನಪ್ಪಿದ್ದರು. ಹತ್ಯೆಯ ಪ್ರಕರಣದಲ್ಲಿ ಸಿಂಗ್‌ ಹಾಗೂ ಇತರ ಏಳು ಜನ ತಪ್ಪಿತಸ್ಥರು ಎಂದು 2019ರ ಮಾರ್ಚ್‌ ತಿಂಗಳಲ್ಲಿ ಕೋರ್ಟ್‌ ಹೇಳಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು