ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದ್ರಿಗಳ ವಿರುದ್ಧ ಅತ್ಯಾಚಾರ ಪ್ರಕರಣ

Last Updated 2 ಜುಲೈ 2018, 20:04 IST
ಅಕ್ಷರ ಗಾತ್ರ

ಕೊಚ್ಚಿ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎನ್ನುವ ಆರೋಪದ ಸಂಬಂಧ, ಮಲಂಕಾರ ಸಿರಿಯನ್ ಧಾರ್ಮಿಕ ಚರ್ಚ್‌ನ ನಾಲ್ವರು ಪಾದ್ರಿಗಳ ವಿರುದ್ಧ ಕೇರಳ ಪೊಲೀಸ್ ಇಲಾಖೆಯ ಅಪರಾಧ ದಳ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದೆ.

ಮಹಿಳೆಯ ಹೇಳಿಕೆ ದಾಖಲಿಸಿಕೊಂಡ ಬಳಿಕ ಪಾದ್ರಿಗಳ ವಿರುದ್ಧಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಪಾದ್ರಿಗಳು ತಮ್ಮ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪಿಸಿಪಟ್ಟಣಂತಿಟ್ಟ ಜಿಲ್ಲೆಯ ವ್ಯಕ್ತಿಯೊಬ್ಬರು ಚರ್ಚ್ ಅಧಿಕಾರಿಯೊಂದಿಗೆ ನಡೆಸಿದ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಆಕೆ ಚರ್ಚ್‌ನಲ್ಲಿ ಮಾಡಿಕೊಂಡ ಪ್ರಾಯಶ್ಚಿತ್ತ ನಿವೇದನೆಯನ್ನು ಬಳಸಿಕೊಂಡು ಬೆದರಿಸಿದ ಪಾದ್ರಿಗಳು, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಳೆದ ತಿಂಗಳು ಪತಿ ಆರೋಪ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT