ಅಗ್ನಿ ಅನಾಹುತ: ಸಿಐಎಸ್‌ಎಫ್‌ ಅಧಿಕಾರಿ ಸಾವು

ಮಂಗಳವಾರ, ಮಾರ್ಚ್ 26, 2019
22 °C

ಅಗ್ನಿ ಅನಾಹುತ: ಸಿಐಎಸ್‌ಎಫ್‌ ಅಧಿಕಾರಿ ಸಾವು

Published:
Updated:

ನವದೆಹಲಿ: ದಕ್ಷಿಣ ದೆಹಲಿಯ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಪಂಡಿತ್‌ ದೀನ್‌ ದಯಾಳ್‌ ಅಂತ್ಯೋದಯ ಭವನದ ಐದನೇ ಮಹಡಿಯಲ್ಲಿರುವ ಸಾಮಾಜಿಕ ನ್ಯಾಯ ಸಚಿವಾಲಯದ ಕಚೇರಿಯಲ್ಲಿ ಬುಧವಾರ ಅಗ್ನಿ ಅನಾಹುತ ಸಂಭವಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್‌) ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಸಚಿವಾಲಯದ ಪ್ರಮುಖ ಕಡತಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಐಎಸ್‌ಎಫ್‌ ಸಬ್‌ ಇನ್‌ಸ್ಪೆಕ್ಟರ್‌ ಎಂ.ಪಿ.ಗೋದಾರಾ (53) ಮೃತಪಟ್ಟವರು. ಸಚಿವಾಲಯದ ಕಚೇರಿಯಿದ್ದ ಅಂತಸ್ತಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಗೋದಾರ ಅವರು ಹಾಗೂ ಸಿಐಎಸ್‌ಎಫ್‌ ಸಿಬ್ಬಂದಿ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ವಿಷಾನಿಲ ಸೇವನೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಗೋದಾರ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.

11 ಅಂತಸ್ತಿನ ಕಟ್ಟಡದಲ್ಲಿ ಹಲವು ಸರ್ಕಾರಿ ಕಚೇರಿಗಳಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !