ಮಂಗಳವಾರ, ಜನವರಿ 28, 2020
29 °C
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ

ಉತ್ತರ ಪ್ರದೇಶ ಹಿಂಸಾಚಾರ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಲಖನೌ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯಿತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಉತ್ತರ ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 9ಕ್ಕೆ ಏರಿಕೆಯಾಗಿದೆ.

ಈ ಮಧ್ಯೆ, ಯಾವೊಬ್ಬ ಪ್ರತಿಭಟನಾಕಾರನೂ ಪೊಲೀಸರ ಗುಂಡಿಗೆ ಬಲಿಯಾಗಿಲ್ಲ ಎಂದು ಉತ್ತರ ಪ್ರದೇಶ ಡಿಜಿಪಿ ಒ.ಪಿ.ಸಿಂಗ್ ಹೇಳಿದ್ದಾರೆ. ಒಂದೇ ಒಂದು ಬಾರಿಯೂ ನಾವು ಶೂಟ್ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಗುಂಡಿನ ದಾಳಿ ನಡೆದಿದೆ ಎಂದಾಗಿದ್ದಲ್ಲಿ ಅದು ಪ್ರತಿಭಟನಾಕಾರರ ಕಡೆಯಿಂದಲೇ ಆಗಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಶುಕ್ರವಾರ ರಾಜ್ಯದ ಹಲವೆಡೆ ಭುಗಿಲೆದ್ದ ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಿಜ್ನೋರ್‌ನಲ್ಲಿ ಇಬ್ಬರು ಮತ್ತು ಮೀರಠ್‌, ಸಂಭಲ್‌ ಮತ್ತು ಫಿರೋಜಾಬಾದ್‌ ಮತ್ತು ಕಾನ್ಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದರು. ಗಲಭೆಗಳಲ್ಲಿ ಸುಮಾರು 50 ಮಂದಿ ಪೊಲೀಸರೂ ಗಾಯಗೊಂಡಿದ್ದರು.

ದೇಶದೆಲ್ಲೆಡೆ ಮುಂದುವರಿದ ಪ್ರತಿಭಟನೆ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯು ಬಿಹಾರ, ದೆಹಲಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಶನಿವಾರವೂ ಮುಂದುವರಿದಿದೆ.

ಇದನ್ನೂ ಓದಿ: 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು