ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ| ಭಾರತದ ಮುಸ್ಲಿಮರಿಗೆ ತೊಂದರೆಯಿಲ್ಲ: ಅಹಮದ್ ಬುಖಾರಿ

Last Updated 18 ಡಿಸೆಂಬರ್ 2019, 5:16 IST
ಅಕ್ಷರ ಗಾತ್ರ

ನವದೆಹಲಿ:‘ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ನಿರಾಶ್ರಿತರ ಮುಸ್ಲಿಮರಿಗೆ ತೊಂದರೆಯಾಗುತ್ತದೆಯೇ ವಿನಃ ಭಾರತದಲ್ಲಿರುವ ಮುಸ್ಲಿಮರಿಗಲ್ಲ’ ಎಂದು ಇಲ್ಲಿನ ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್‌ ಅಹಮದ್ಬುಖಾರಿ ಹೇಳಿದ್ದಾರೆ.

ಕಾಯ್ದೆ ವಿರೋಧಿಸಿ ದೇಶದಾದ್ಯಂತ ಭಾರಿ ಹಿಂಸಾಚಾರತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ ಸೈಯದ್‌ ಅವರು ಈ ಹೇಳಿಕೆ ನೀಡಿದ್ದಾರೆ.

‘ರಾಷ್ಟ್ರೀಯ ಪೌರತ್ವ ನೋಂದಣಿಗೂ (ಎನ್‌ಆರ್‌ಸಿ), ಪೌರತ್ವ (ತಿದ್ದುಪಡಿ) ಕಾಯ್ದೆಗೂ (ಸಿಎಎ) ವ್ಯತ್ಯಾಸವಿದೆ. ಸಿಎಎ ಈಗಾಗಲೇ ಕಾಯ್ದೆಯಾಗಿದೆ. ಆದರೆ, ಎನ್‌ಆರ್‌ಸಿ ಕೇವಲ ಘೋಷಣೆಯಾಗಿದೆಯೇ ಹೊರತು ಇನ್ನೂ ಕಾಯ್ದೆಯಾಗಿಲ್ಲ’ ಎಂದು ತಿಳಿಸಿದ್ದಾರೆ.

‘ಪ್ರತಿಭಟನೆ ಎನ್ನುವುದು ಭಾರತೀಯರ ಹಕ್ಕು. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದಾಗ್ಯೂ, ಪ್ರತಿಭಟನೆಯ ಮಿತಿಯನ್ನು ತಿಳಿದಿರಬೇಕು. ನಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ’ ಎಂದು ಹೇಳಿದ್ದಾರೆ.

ದೆಹಲಿಯ ಸೀಲಾಂಪುರದಲ್ಲಿ ಮಂಗಳವಾರ ಸಂಜೆ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು,12 ಪೊಲೀಸರು ಸೇರಿ 21 ಮಂದಿ ಗಾಯಗೊಂಡಿದ್ದಾರೆ. ದೇಶದಾದ್ಯಂತ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT