ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಮಿಯಾ ಮಿಲಿಯಾ ಹಿಂಸಾಚಾರ: ಇಂದು ಸುಪ್ರೀಂ ಕೋರ್ಟ್‌ ವಿಚಾರಣೆ

ಹಿಂಸೆ ನಿಲ್ಲದಿದ್ದರೆ ವಿಚಾರಣೆ ಇಲ್ಲ; ಸುಪ್ರೀಂ ಕೋರ್ಟ್ ಸ್ಪಷ್ಟ ಮಾತು
Last Updated 17 ಡಿಸೆಂಬರ್ 2019, 2:38 IST
ಅಕ್ಷರ ಗಾತ್ರ

ನವದೆಹಲಿ:ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ
ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ತಕ್ಷಣವೇ ಗಲಭೆ ನಿಲ್ಲಿಸುವಂತೆ ಸೋಮವಾರ ಸೂಚಿಸಿದೆ.

ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯ,ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳುಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಸಲಾಗಿದ್ದು, ಈ ಸಂಬಂಧ ಮಂಗಳವಾರ ವಿಚಾರಣೆ ಕೈ ಗೆತ್ತಿಕೊಳ್ಳುವುದಾಗಿ ಕೋರ್ಟ್ ತಿಳಿಸಿದೆ.

ಗಲಭೆ ಮುಂದುವರಿದರೆ ವಿಚಾರಣೆ ನಡೆಸುವುದಿಲ್ಲ ಎಂದು ಮುಖ್ಯನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಪೀಠ ಎಚ್ಚರಿಸಿದೆ. ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಕೈಗೆತ್ತಿಕೊಳ್ಳಬೇಕು ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್, ಕಾಲಿನ್ ಗೊನ್‌ಸಾಲ್ವೆಸ್ ಅವರ ನೇತೃತ್ವದವಕೀಲರ ತಂಡ ಮನವಿ ಮಾಡಿತು.

‘ಪೊಲೀಸರು ವಿದ್ಯಾರ್ಥಿಗಳನ್ನುಬಂಧಿಸಿಟ್ಟಿರುವ ಜೈಲು ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡಿ ಬಂದಿದ್ದೇನೆ’ ಎಂದು ಗೊನ್‌ಸಾಲ್ವೆಸ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಒಟ್ಟಿನಲ್ಲಿ ಹಿಂಸಾಚಾರ ನಿಲ್ಲಬೇಕು ಎಂದಿತು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿದ ದಾಖಲಿಸಿರುವ ಎಲ್ಲ ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT