ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಲಯಕ್ಕೆ ಸಿಐಎಸ್‌ಎಫ್‌ ಭದ್ರತೆ: ಕೇಂದ್ರ ಸರ್ಕಾರಕ್ಕೆ ಸಿಜೆಐ ಪತ್ರ

Last Updated 8 ಜನವರಿ 2020, 18:25 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಾಲಯಗಳಿಗೆ ಭದ್ರತೆ ಒದಗಿಸಲು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯನ್ನು (ಸಿಐಎಸ್‌ಎಫ್‌) ನಿಯೋಜಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಬುಧವಾರ ತಿಳಿಸಿದ್ದಾರೆ.

ಸಿಐಎಸ್‌ಎಫ್‌ ಭದ್ರತೆ ಒದಗಿಸಿದ್ದರೆ ಈಚೆಗೆ ತೀಸ್‌ ಹಜಾರಿ ನ್ಯಾಯಾಲಯದಲ್ಲಿ ವಕೀಲರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯುತ್ತಿರಲಿಲ್ಲ ಎಂದಿದ್ದಾರೆ.

ನ್ಯಾಯಾಲಯಗಳ ಭದ್ರತೆಗೆ ನಿಯೋಜಿಸಲು ಸಿಐಎಸ್‌ಎಫ್‌ನ ಪ್ರತ್ಯೇಕ ಘಟಕವನ್ನು ರಚಿಸುವಂತೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್‌ ಅವರನ್ನೊಳಗೊಂಡ ನ್ಯಾಯಪೀಠವು ಸಾಲಿಸಿಟರ್ ಜನರಲ್‌ ತುಷಾರ್ ಮೆಹ್ತಾ ಅವರನ್ನು ಕೇಳಿಕೊಂಡಿದೆ.

ಈ ಸಲಹೆಯನ್ನು ಪರಿಗಣಿಸುವುದಾಗಿ ಹೇಳಿರುವ ತುಷಾರ್‌ ಮೆಹ್ತಾ, ‘ಮದ್ರಾಸ್‌ ಹೈಕೋರ್ಟ್‌ಗೆ ಈಗಾಗಲೇ ಸಿಐಎಸ್‌ಎಫ್‌ ಭದ್ರತೆ ಒದಗಿಸಲಾಗುತ್ತಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT