ಸೋಮವಾರ, ಡಿಸೆಂಬರ್ 9, 2019
20 °C

ಆರ್‌ಟಿಐ ವ್ಯಾಪ್ತಿಗೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ: ನಾಳೆ ತೀರ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಖ್ಯನ್ಯಾಯಮೂರ್ತಿ (ಸಿಜೆಐ) ಅವರೂ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಒಳಪಡುತ್ತಾರೆ ಎಂಬ ದೆಹಲಿ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಕುರಿತಂತೆ ಸುಪ್ರೀಂಕೋರ್ಟ್‌ ಬುಧವಾರ (ನ. 13) ತೀರ್ಪು ಪ್ರಕಟಿಸಲಿದೆ.

ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಮಧ್ಯಾಹ್ನ 2ಕ್ಕೆ ತೀರ್ಪು ಪ್ರಕಟಿಸುವುದು ಎಂದು ಸುಪ್ರೀಂಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ. ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠದಲ್ಲಿ, ನ್ಯಾಯಮೂರ್ತಿಗಳಾದ ಎನ್‌.ವಿ.ರಮಣ, ಡಿ.ವೈ.ಚಂದ್ರಚೂಡ್‌, ದೀಪಕ್‌ ಗುಪ್ತಾ ಹಾಗೂ ಸಂಜೀವ್‌ ಖನ್ನಾ ಇದ್ದಾರೆ.

‘ನ್ಯಾಯಾಂಗ ವ್ಯವಸ್ಥೆಯಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದು ನ್ಯಾಯಾಧೀಶರ ಹಕ್ಕು ಅಲ್ಲ. ಆದರೆ, ಆ ಹುದ್ದೆ ಅವರ ಮೇಲಿನ ಜವಾಬ್ದಾರಿ’ ಎಂದು ದೆಹಲಿ ಹೈಕೋರ್ಟ್‌ 2010ರ ಜನವರಿ 10ರಂದು ಮಹತ್ವದ ತೀರ್ಪು ನೀಡಿತ್ತು.‌

ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನ ಮಹಾ ಕಾರ್ಯದರ್ಶಿ ಹಾಗೂ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಐಸಿ) ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಗೊಗೊಯಿ ನೇತೃತ್ವದ ಪೀಠ, ಏ. 4ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು