ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತಳೆ ವಲಯದ ಜಿಲ್ಲೆಗಳಲ್ಲಿನ ಸಂಚಾರದ ಬಗ್ಗೆ ಕೆಂದ್ರದಿಂದ ಸ್ಪಷ್ಟನೆ

Last Updated 2 ಮೇ 2020, 13:36 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್‌ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಲಾಕ್‌ ಡೌನ್‌ ಅವಧಿಯನ್ನು ಎರಡು ವಾರಗಳ ಕಾಲ ವಿಸ್ತರಿಸಿದೆ. ಈ ಅವಧಿಯಲ್ಲಿ ಕಿತ್ತಳೆ ವಲಯದಲ್ಲಿನ ಸಂಚಾರದ ಬಗ್ಗೆ ಇರಬಹುದಾದ ಗೊಂದಲಗಳನ್ನು ನಿವಾರಿಸುವ ಪ್ರಯತ್ನ ಮಾಡಿದೆ ಕೇಂದ್ರ ಸರ್ಕಾರ.

ಅದರಂತೆ ಕಿತ್ತಳೆ ವಲಯದ ವ್ಯಾಪ್ತಿಯಲ್ಲಿ ಜಿಲ್ಲೆಗಳ ಒಳಗಿನ ಮತ್ತು ಹೊರಗಿನ ಬಸ್‌ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಟ್ಯಾಕ್ಸಿ, ಕ್ಯಾಬ್‌ಗಳಿಗೆ ಷರತ್ತು ಬದ್ಧ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಒಬ್ಬ ಚಾಲಕ, ಇಬ್ಬರು ಪ್ರಯಾಣಿಕರು ಟ್ಯಾಕ್ಸಿ, ಕ್ಯಾಬ್‌ಗಳಲ್ಲಿ ಪ್ರಯಾಣಿಸಬಹುದು.

ಅನುಮತಿ ನೀಡಲಾದ ಚಟುವಟಿಕೆಗಳಿಗೆ ಮಾತ್ರ ವ್ಯಕ್ತಿಗಳು ಮತ್ತು ವಾಹನಗಳ ಅಂತರ ಜಿಲ್ಲಾ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಲ್ಕು ಚಕ್ರಗಳ ವಾಹನದಲ್ಲಿ ಚಾಲಕನ ಜೊತೆಗೆಇಬ್ಬರು ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ.

ನಿಮ್ಮ ಜಿಲ್ಲೆ ಯಾವ ವಲಯದಲ್ಲಿದೆ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT