ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಜುಲೈನಲ್ಲಿ 10 ಮತ್ತು 12ನೇ ತರಗತಿ ಫಲಿತಾಂಶ

Last Updated 30 ಮೇ 2020, 21:53 IST
ಅಕ್ಷರ ಗಾತ್ರ

ಇರೋಡ್‌ (ತಮಿಳುನಾಡು): 10 ಮತ್ತು 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಜುಲೈ ತಿಂಗಳಲ್ಲಿ ಪ್ರಕಟಿಸಲಾಗುವುದು ಎಂದು ತಮಿಳುನಾಡು ಶಾಲಾ ಶಿಕ್ಷಣ ಸಚಿವ ಕೆ.ಎ.ಸೆಂಗೊಟ್ಟೈಯಾನ್ ಶನಿವಾರ ತಿಳಿಸಿದ್ದಾರೆ.

‘ಈಗಾಗಲೇ ಶಿಕ್ಷಕರು 12ನೇ ತರಗತಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ನಿರತರಾಗಿದ್ದಾರೆ. ಸರ್ಕಾರ ಘೋಷಿಸಿದ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯ ಪ್ರಕಾರ 10ನೇ ತರಗತಿಯ ಪರೀಕ್ಷೆಗಳು ಜೂನ್ 15ರಿಂದ 25ರವರೆಗೆ ನಡೆಯಲಿವೆ. ಒಟ್ಟು 9.5ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಕೊರೊನಾ ವೈರಸ್‌ ಕಾರಣಕ್ಕಾಗಿ ಶಾಲೆಗಳ ಪುನರಾರಂಭದ ದಿನಾಂಕವನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಈ ಬಗ್ಗೆ ಪರಿಶೀಲಿಸಲು ಸರ್ಕಾರವು ರಚಿಸಿದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT