ಸೋಮವಾರ, ಜುಲೈ 26, 2021
27 °C

ವಿಶೇಷ ಮಕ್ಕಳು ಪರೀಕ್ಷೆ ಬರೆಯಬೇಕಾಗಿಲ್ಲ: ಸಿಬಿಎಸ್‌ಇ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌ನಿಂದಾಗಿ ಮುಂದೂಡಲ್ಪಟ್ಟ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳನ್ನು ಬರೆಯಲು ವಿಶೇಷ ಮಕ್ಕಳು ನಿರಾಕರಿಸಬಹದುದಾಗಿದೆ ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಹೇಳಿದೆ.

ವಿಶೇಷ ಮಕ್ಕಳಿಗೆ ಪರೀಕ್ಷೆ ಬರೆಯಲು ಬೇರೆಯವರ ಸಹಾಯ ಬೇಕಾಗುತ್ತದೆ. ಇಂಥ ಸಂದರ್ಭದಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುವುದರಿಂದ ವಿಶೇಷ ಮಕ್ಕಳು ಪರೀಕ್ಷೆ ಬರಬೇಕಾಗಿಲ್ಲ. ಪರೀಕ್ಷೆ ಬರೆಯದಿರುವ ತಮ್ಮ ನಿರ್ಧಾರವನ್ನು ಆಯಾ ಶಾಲೆಗಳಿಗೆ ತಿಳಿಸಬೇಕು. ಇಂಥ ಮಕ್ಕಳ ಫಲಿಯಾಂಶವನ್ನು ಪರ್ಯಾಣ ಮೌಲ್ಯಮಾಪನ ವ್ಯವಸ್ಥೆಯ ಮೂಲಕ ನೀಡಲಾಗುವುದು ಎಂದು ಸಿಬಿಎಸ್‌ಇ ಹೇಳಿದೆ.

ಪರ್ಯಾಣ ಮೌಲ್ಯಮಾಪನ ವ್ಯವಸ್ಥೆಯ ಕುರಿತು ಚಿಂತನೆ ನಡೆದಿದೆ ಎಂದು ಮಂಡಳಿ ಹೇಳಿದೆ. ಪರೀಕ್ಷೆಗಳು ಜುಲೈ 1ರಿಂದ 15ರ ವರೆಗೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು