ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು|10ನೇ ತರಗತಿ ಪರೀಕ್ಷೆ ರದ್ದು; ವಿದ್ಯಾರ್ಥಿಗಳೆಲ್ಲ ಪಾಸ್‌

Last Updated 9 ಜೂನ್ 2020, 10:35 IST
ಅಕ್ಷರ ಗಾತ್ರ

ಚೆನ್ನೈ : ಕೋವಿಡ್‌–19 ವ್ಯಾಪಕಗೊಳ್ಳುತ್ತಿರುವ ಕಾರಣ ತಮಿಳುನಾಡಿನಲ್ಲಿ 10ನೇ ತರಗತಿಯ ಪಬ್ಲಿಕ್‌ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಬಡ್ತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.

ಜೂನ್ 15ರಿಂದ ಆರಂಭವಾಗಬೇಕಿದ್ದ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಅಂತೆಯೇ 11ನೇ ತರಗತಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ ವಿಷಯಗಳ ಪರೀಕ್ಷೆಗಳನ್ನೂ ರದ್ದುಪಡಿಸಲಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು, ಅವರಿಗೆ ಬಡ್ತಿ ನೀಡಲಾಗಿದೆ ಎಂದು ಅವರು ಘೋಷಿಸಿದರು.

ಚೆನ್ನೈ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಕೋವಿಡ್- 19 ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದರು. ಅಲ್ಲದೆ ಈ ಸಂಬಂಧ ಪೋಷಕರೂ ಮನವಿ ಮಾಡಿದ್ದರು. ಸಾಂಕ್ರಾಮಿಕ ರೋಗ ತಜ್ಞರ ಅಭಿಪ್ರಾಯವನ್ನೂ ಕೇಳಲಾಗಿದೆ ಎಂದು ಅವರು ತಿಳಿಸಿದರು.

ತೆಲಂಗಾಣ ರಾಜ್ಯದಲ್ಲೂ ಕೋವಿಡ್‌ ಹಿನ್ನೆಲೆಯಲ್ಲಿ, 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೇ, ಉತ್ತೀರ್ಣಗೊಳಿಸಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ಅವರು ಸೋಮವಾರ ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT