ಗುರುವಾರ , ಜುಲೈ 16, 2020
23 °C

3–5 ತಿಂಗಳಲ್ಲಿ ಕ್ಲಿನಿಕಲ್‌ ಟ್ರಯಲ್‌ ಹಂತಕ್ಕೆ 4 ಲಸಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19ಗೆ ಭಾರತದಲ್ಲಿ ಅಭಿವೃದ್ಧಿಪಡಿಸಲಾದ 14 ವ್ಯಾಕ್ಸಿನ್‌ ಕ್ಯಾಂಡಿಡೇಟ್ಸ್‌ (ಸಂಭಾವ್ಯ ಲಸಿಕೆ) ಪೈಕಿ ನಾಲ್ಕು ಮುಂದಿನ ಮೂರರಿಂದ ಐದು ತಿಂಗಳೊಳಗಾಗಿ ಕ್ಲಿನಿಕಲ್‌ ಟ್ರಯಲ್‌ ಹಂತಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್‌ ತಿಳಿಸಿದರು. 

ಬಿಜೆಪಿ ವಕ್ತಾರ ಜಿವಿಎಲ್‌ ನರಸಿಂಹ ರಾವ್‌ ಅವರೊಂದಿಗೆ ನಡೆದ ಆನ್‌ಲೈನ್‌ ಸಂವಾದದಲ್ಲಿ ಮಾತನಾಡಿದ ಹರ್ಷ ವರ್ಧನ್‌, ‘ಸೋಂಕು ವ್ಯಾಪಿಸುವುದನ್ನು ತಡೆಯುವ ಉದ್ದೇಶದಿಮದ ಇಡೀ ವಿಶ್ವವೇ ಲಸಿಕೆ ಅಭಿವೃದ್ಧಿಪಡಿಸುವ ಪ್ರಕ್ರಿಯೆಯಲ್ಲಿದೆ. ನೂರಕ್ಕೂ ಅಧಿಕ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಇವುಗಳು ಬೇರೆ ಬೇರೆ ಹಂತದಲ್ಲಿವೆ. ವಿಶ್ವ ಆರೋಗ್ಯ ಸಂಸ್ಥೆ ಸಮನ್ವಯದಲ್ಲಿ ಲಸಿಕೆ ಅಭಿವೃದ್ಧಿ ನಡೆದಿದೆ’ ಎಂದರು. 

‘ಈ ಪ್ರಕ್ರಿಯೆಗೆ ಭಾರತವೂ ನೆರವು ನೀಡುತ್ತಿದ್ದು, 14 ಸಂಭಾವ್ಯ ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ. ಪ್ರಸ್ತುತ ಇವುಗಳು ಪ್ರಿಕ್ಲಿನಿಕಲ್ ಟ್ರಯಲ್ ಹಂತದಲ್ಲಿವೆ. ಕೋವಿಡ್‌–19ಗೆ ಯಾವಾಗ ಲಸಿಕೆ ಸಿಗುತ್ತದೆ ಎಂದು ನಿಖರವಾಗಿ ಹೇಳುವುದು ಕಷ್ಟ. ಆದರೆ, ವೈದ್ಯನಾಗಿ ಅನುಭವ ಹೊಂದಿರುವ ಹಿನ್ನೆಲೆಯಲ್ಲಿ ಕನಿಷ್ಠ 1 ವರ್ಷ ಹಿಡಿಯುತ್ತದೆ ಎಂದು ಹೇಳಬಲ್ಲೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು