ಗುರುವಾರ , ಮೇ 28, 2020
27 °C

ಛತ್ತೀಸ್‌ಗಡ: ಸಿಂಹದೇವ್ ಸಿ.ಎಂ ಅಭ್ಯರ್ಥಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ನವದೆಹಲಿ: ಸೌಮ್ಯ ಸ್ವಭಾವದ ಟಿ.ಎಸ್. ಸಿಂಹದೇವ್ (66) ಅವರು ಛತ್ತೀಸ್‌ಗಡದ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಒಮ್ಮತದಿಂದ ಆಯ್ಕೆ ಮಾಡಲಿದ್ದಾರೆ ಎಂದು ಛತ್ತೀಸ್‌ಗಡ ಎಐಸಿಸಿ ಉಸ್ತುವಾರಿ ಪಿ.ಎಲ್. ಪೂನಿಯಾ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. 

ಹಿಂದುಳಿದ ವರ್ಗಗಳ ನಾಯಕರಾದ ದುರ್ಗ್ ಗ್ರಾಮೀಣ ಕ್ಷೇತ್ರದಿಂದ ಆಯ್ಕೆಯಾಗಿರುವ ತಾಮ್ರಧ್ವಜ ಸಾಹು ಹಾಗೂ ಛತ್ತೀಸ್‌ಗಡ ಕಾಂಗ್ರೆಸ್ ಘಟಕದ ಅಧ್ಯಕ್ಷ ಭೂಪೇಶ್ ಬಘೆಲ್ ಅವರೂ ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ. 

ಬಘೆಲ್ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದು, ಮುಖ್ಯಮಂತ್ರಿ ಪಟ್ಟದ ಆಕಾಂಕ್ಷೆಗೆ ಹಿನ್ನೆಡೆ ಉಂಟುಮಾಡುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಅವರು ಮುಂದುವರಿಯುವ ಸಾಧ್ಯತೆಯಿದೆ. 

ಸಾಹು ಅವರ ಆಯ್ಕೆಯಿಂದ ಇತರೆ ಹಿಂದುಳಿದ ವರ್ಗಗಳ ವೋಟ್‌ಬ್ಯಾಂಕ್‌ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮಾಜಿ ಕೇಂದ್ರ ಸಚಿವ ಚಂದ್ರಹಾಸ್ ಮಹಾಂತ ಅವರಿಗೆ ಇತರ ನಾಯಕರ ರೀತಿ ಜನಬೆಂಬಲ ಇಲ್ಲ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು