ಭಾನುವಾರ, ಸೆಪ್ಟೆಂಬರ್ 26, 2021
28 °C

ಪ್ರಧಾನಿ ಆರೋಪ ಮುಕ್ತ: ಅಸಮ್ಮತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆ ಕುರಿತ ದೂರಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರೋಪ
ಮುಕ್ತಗೊಳಿಸುವ ಆಯೋಗದ ನಿರ್ಧಾರಕ್ಕೆ ಒಬ್ಬ ಸದಸ್ಯ ಒಪ್ಪಿಗೆ ಸೂಚಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಮಹಾರಾಷ್ಟ್ರದಲ್ಲಿ ಕಳೆದ ತಿಂಗಳು ಮಾಡಿದ್ದ ಎರಡು ಭಾಷಣಗಳು ನೀತಿ ಸಂಹಿತೆ ಉಲ್ಲಂಘನೆ ಎಂದು ದೂರಿ ಕಾಂಗ್ರೆಸ್‌ ಪಕ್ಷವು ಆಯೋಗಕ್ಕೆ ದೂರು ನೀಡಿತ್ತು. ವಿಚಾರಣೆ ನಡೆಸಿದ ಆಯೋಗ ಪ್ರಧಾನಿಯನ್ನು ಆರೋಪದಿಂದ ಮುಕ್ತಗೊಳಿಸಿತ್ತು. ಚುನಾವಣಾ ಆಯೋಗ ಮೂರು ದಿನಗಳ ಹಿಂದೆ ನಿರ್ಧಾರ ಪ್ರಕಟಿಸಿತ್ತು. ಮೂಲಗಳ ಪ್ರಕಾರ, ಮಹಾರಾಷ್ಟ್ರದ ವಾರ್ಧಾದಲ್ಲಿ ಏ.1ರಂದು ಪ್ರಧಾನಿ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ ತೀರ್ಮಾನಕ್ಕೆ ಒಬ್ಬ ಸದಸ್ಯರು ಅಸಮ್ಮತಿ  ವ್ಯಕ್ತಪಡಿಸಿದ್ದಾರೆ.

ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವ ವಯನಾಡ್‌ನಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಮಾಡಿದ್ದಾರೆ ಎಂದು ಪ್ರಧಾನಿ ವ್ಯಂಗ್ಯವಾಡಿದ್ದರು.

2:1ರ ಬಹುಮತದಲ್ಲಿ ದೂರು ತೀರ್ಮಾನಿಸಲು ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು