12 ನೇ ತರಗತಿಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

7

12 ನೇ ತರಗತಿಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Published:
Updated:

 ಹಿಸಾರ್: ಹರ್ಯಾಣದ ಮಹೇಂದ್ರಗಢ್ ಜಿಲ್ಲೆಯ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಬುಧವಾರ ಸಾಮೂಹಿಕ ಅತ್ಯಾಚಾರ ನಡೆದಿದೆ. 12ನೇ ತರಗತಿಯಲ್ಲಿ ಟಾಪರ್ ಆಗಿದ್ದ ಈ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂತ್ರಸ್ತೆಯಿಂದಲೇ ನಮಗೆ ದೂರು ಲಭಿಸಿದೆ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ನಂತರ ನಾವು ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಆರೋಪಿಗಳ ವಿರುದ್ಧ ಜೀರೋ ಎಫ್ಐಆರ್ ದಾಖಲಿಸಿದ್ದು ಮುಂದಿನ ತನಿಖೆ ಕನಿನಾ ಪೊಲೀಸರು ನಡೆಸಲಿದ್ದಾರೆ ಎಂದು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹೀರಾಮಣಿ ದೇವಿ ಹೇಳಿದ್ದಾರೆ.

ಕನಿನಾದಲ್ಲಿರುವ ಕೋಚಿಂಗ್ ಸೆಂಟರ್‌ಗೆ ಹೋಗುತ್ತಿದ ವೇಳೆ ಮೂವರು ಯುವಕರು ವಿಳಾಸ ಕೇಳುವ ನೆಪದಲ್ಲಿ ಅಡ್ಡಗಟ್ಟಿದ್ದಾರೆ. ಕೆಲವು ಹೊತ್ತಿನ ನಂತರ ಅವರು ನನಗೆ ಕುಡಿಯಲು ಪಾನೀಯವೊಂದನ್ನು ಕೊಟ್ಟರು. ಅದು ಕುಡಿದ ನಂತರ ಪ್ರಜ್ಞೆ ತಪ್ಪಿತು.
ಆನಂತರ ಅವರು ನನ್ನನ್ನು ಬೇರೊಂದು ಸ್ಥಳಕ್ಕೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

 ಮನೆಗೆ ತಲುಪಿದ ಕೂಡಲೇ ಹೆತ್ತವರಿಗೆ ವಿಷಯ ತಿಳಿಸಿದ್ದು ಅವರೇ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 4

  Sad
 • 3

  Frustrated
 • 9

  Angry

Comments:

0 comments

Write the first review for this !