ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೋ ಮಾಜಿ ವಿಜ್ಞಾನಿಗೆ ₹1.3 ಕೋಟಿ ಪರಿಹಾರ

Last Updated 27 ಡಿಸೆಂಬರ್ 2019, 20:30 IST
ಅಕ್ಷರ ಗಾತ್ರ

ತಿರುವನಂತಪುರ: ಕಾನೂನು ಬಾಹಿರ ಬಂಧನ ಹಾಗೂ ಚಿತ್ರಹಿಂಸೆ ಅನುಭವಿಸಿದ ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌ ಅವರಿಗೆ ₹1.3 ಕೋಟಿ ಪರಿಹಾರ ನೀಡಲು ಕೇರಳ ಸಚಿವ ಸಂಪುಟ ಗುರುವಾರ ತಾತ್ವಿಕ ಒಪ್ಪಿಗೆ ನೀಡಿದೆ.

ನಾರಾಯಣನ್‌ ವಿರುದ್ಧ ಕೇರಳದ ಇಸ್ರೋದಲ್ಲಿ ಬೇಹುಗಾರಿಕೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು. 1990ರ ಈ ಪ್ರಕರಣದಲ್ಲಿ ಅವರು ಆರೋಪ ಮುಕ್ತರಾಗಿದ್ದರು. ನಂತರ ಅವರು ಪರಿಹಾರ ಕೋರಿ ತಿರುವನಂತಪುರದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣ ಇತ್ಯರ್ಥ ಪಡಿಸಲು ಕೇರಳ ಸರ್ಕಾರ ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಕೆ.ಜಯಕುಮಾರ್‌ ಅವರನ್ನು ನಿಯೋಜಿಸಿತ್ತು. ಜಯಕುಮಾರ್‌ ಅವರು ₹1.3 ಕೋಟಿ ಪರಿಹಾರ ನೀಡುವಂತೆ ಶಿಫಾರಸು ಮಾಡಿದ್ದರು. ಪರಿಹಾರ ನೀಡುವ ಸಂಪುದ ಒಪ್ಪಿಗೆಯ ಪ್ರಸ್ತಾವವನ್ನು ಶೀಘ್ರದಲ್ಲಿಯೇ ನ್ಯಾಯಾಲಯಕ್ಕೆ ಸಲ್ಲಿಸಿ, ಅನುಮೋದನೆ ಪಡೆಯಲಾಗುವುದು ಎಂದು ಹೇಳಲಾಗಿದೆ.

ಈ ಹಿಂದೆಯೂ ನಾರಾಯಣನ್‌ ಅವರಿಗೆ ಸುಪ್ರೀಂ ಕೋರ್ಟ್‌ ₹50 ಲಕ್ಷ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ₹10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT