ಜೂಜು, ಬೆಟ್ಟಿಂಗ್‌ ಸಕ್ರಮಕ್ಕೆ ಶಿಫಾರಸು ಮಾಡಿಲ್ಲ: ಕಾನೂನು ಆಯೋಗ ಸ್ಪಷ್ಟನೆ

7

ಜೂಜು, ಬೆಟ್ಟಿಂಗ್‌ ಸಕ್ರಮಕ್ಕೆ ಶಿಫಾರಸು ಮಾಡಿಲ್ಲ: ಕಾನೂನು ಆಯೋಗ ಸ್ಪಷ್ಟನೆ

Published:
Updated:

ನವದೆಹಲಿ: ‘ಜೂಜು ಮತ್ತು ಕ್ರಿಕೆಟ್‌ ಬೆಟ್ಟಿಂಗ್‌ ಶಾಸನಬದ್ಧಗೊಳಿಸಲು ಶಿಫಾರಸು ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಇಂತಹ ಯಾವುದೇ ಶಿಫಾರಸು ಮಾಡಿಲ್ಲ’ ಎಂದು ಕಾನೂನು ಆಯೋಗ ಸ್ಪಷ್ಟಪಡಿಸಿದೆ.

ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಆಯೋಗವು ‘ಅಕ್ರಮ ದಂಧೆಗಳನ್ನು ಸಂಪೂರ್ಣ ನಿಷೇಧಿಸುವಂತೆ ಶಿಫಾರಸು ಮಾಡಿದ್ದೇವೆ. ಆದರೆ, ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ’ ಎಂದು ಸ್ಪಷ್ಟನೆ ನೀಡಿದೆ. ಇದಕ್ಕೆ ಪೂರಕವಾಗಿ ವರದಿಯ ಪ್ರತಿಯನ್ನು ಬಿಡುಗಡೆ ಮಾಡಿದ್ದಾರೆ.

‘ಜೂಜು ಮತ್ತು ಬೆಟ್ಟಿಂಗ್‌ನಂತಹ ಚಟುವಟಿಕೆಗಳನ್ನು ದೇಶದ ಪ್ರಸ್ತುತ ಸನ್ನಿವೇಶದಲ್ಲಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಾಗಾಗಿ, ಅವುಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವುದು ನಮ್ಮ ಮುಂದಿರುವ ಏಕೈಕ ಆಯ್ಕೆಯಾಗಿದೆ’ ಎಂದು ಶಿಫಾರಸು ಮಾಡಿರುವುದಾಗಿ ಆಯೋಗದ ಜಂಟಿ ಕಾರ್ಯದರ್ಶಿ ಮತ್ತು ಕಾನೂನು ಅಧಿಕಾರಿ ಎ.ಕೆ.ಉಪಾಧ್ಯಾಯ್‌ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ದಂಧೆಗಳನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಾಗದಿದ್ದರೆ, ಇವುಗಳನ್ನು ನಿಯಂತ್ರಿಸಲು ಕೆಲವು ಮಾರ್ಗಸೂಚಿ ಹಾಗೂ ರಕ್ಷಣಾ ಕ್ರಮಗಳನ್ನು ಜಾರಿಗೆ ತರುವಂತೆ ಸಂಸತ್‌ ಮತ್ತು ರಾಜ್ಯಗಳ ಶಾಸನಸಭೆಗಳಿಗೂ ಶಿಫಾರಸು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !