ಶನಿವಾರ, ಜುಲೈ 31, 2021
27 °C

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ 2 ಸ್ಥಾನ ಗೆಲ್ಲಲಿದೆ –ಅವಿನಾಶ್ ಪಾಂಡೆ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ಎರಡು ರಾಜ್ಯಸಭಾ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ  ಗೆಲ್ಲಲಿದೆ ಎಂದು ರಾಜಸ್ಥಾನದ ಕಾಂಗ್ರೆಸ್‌ ಪಕ್ಷದ ನಾಯಕ ಅವಿನಾಶ್ ಪಾಂಡೆ ಹೇಳಿದ್ದಾರೆ.

ಬಿಜೆಪಿ ವಾಮಮಾರ್ಗದ ಮೂಲಕ ಗೆಲ್ಲುವ ಪ್ರಯತ್ನ ಮಾಡುತ್ತಿದೆ. ಅವರ ಕುದುರೆ ವ್ಯಾಪಾರದ ತಂತ್ರ ಫಲಿಸುವುದಿಲ್ಲ ಎಂದು ಅವಿನಾಶ್‌ ಪಾಂಡೆ ಶನಿವಾರ ತಡ ರಾತ್ರಿ ತಿಳಿಸಿದ್ದಾರೆ.

ಇತರೆ ಪಕ್ಷದ ಶಾಸಕರು, ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲಿದ್ದು ಕಾಂಗ್ರೆಸ್‌ ಸುಲಭವಾಗಿ ಎರಡು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಪಾಂಡೆ ವ್ಯಕ್ತಪಡಿಸಿದರು. ಜೂನ್‌ 19ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಲಿದೆ ಎಂದರು.

ಕಾಂಗ್ರೆಸ್‌ ಪಕ್ಷ ಕೆ.ಸಿ.ವೇಣುಗೋಪಾಲ್‌ ಹಾಗೂ ನೀರಜ್‌ ಡಾಂಗಿ ಅವರನ್ನು ಕಣಕ್ಕೆ ಇಳಿಸಿದೆ. ರಾಜಸ್ಥಾನ ವಿಧಾನಸಭೆಯ ಬಲಾಬಲದ ಪ್ರಕಾರ ಕಾಂಗ್ರೆಸ್‌ 2, ಬಿಜೆಪಿ 1 ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಆದರೆ ಬಿಜೆಪಿ 2ನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಕಾಂಗ್ರೆಸ್‌ನಲ್ಲಿ ಆತಂಕ ಉಂಟಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು