ನಕಲಿ ಪತ್ರ ಪ್ರಕಟಣೆ: ದೂರು

ಭಾನುವಾರ, ಮೇ 19, 2019
34 °C

ನಕಲಿ ಪತ್ರ ಪ್ರಕಟಣೆ: ದೂರು

Published:
Updated:

ನವದೆಹಲಿ: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ಕೋರುವ ಹೋರಾಟದ ವಿಚಾರವಾಗಿ ಪಕ್ಷಕ್ಕೆ ಮುಜುಗರ ಉಂಟು ಮಾಡುವಂತಹ ನಕಲಿ ಪತ್ರವೊಂದನ್ನು ಪ್ರಕಟಿಸಿರುವ ಕನ್ನಡದ ದಿನಪತ್ರಿಕೆ ಹಾಗೂ ವಾಹಿನಿಯೊಂರ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ಕೋರಿ ಕಾಂಗ್ರೆಸ್‌ ಪಕ್ಷವು ಕೇಂದ್ರ ಚುನಾವಣಾ ಆಯೋಗಕ್ಕೆ ಸೋಮವಾರ ದೂರು ನೀಡಿದೆ.

ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಮುಖ್ಯಸ್ಥ, ಸಚಿವ ಎಂ.ಬಿ. ಪಾಟೀಲ ಅವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರಿಗೆ 2017ರಲ್ಲಿ ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವನ್ನು ಲೋಕಸಭೆ ಚುನಾವಣೆ ಸಂದರ್ಭ ಪ್ರಕಟಿಸುವ ಮೂಲಕ ಈ ಮಾಧ್ಯಮ ಸಂಸ್ಥೆಗಳು ಪಕ್ಷಕ್ಕೆ ಧಕ್ಕೆ ಉಂಟು ಮಾಡಲು ಯತ್ನಿಸಿವೆ ಎಂದು ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ ಆಯೋಗಕ್ಕೆ ದೂರು ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಮತದಾನಕ್ಕೆಂದು ತೆರಳಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮತಗಟ್ಟೆಯಿಂದ ಹೊರಬಂದು, ‘ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂಬ ಹೇಳಿಕೆ ನೀಡುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !