ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಸ್ವಂತ ಬಲದಿಂದ ಸ್ಪರ್ಧೆ: ಸಿಂಧಿಯಾ

Last Updated 9 ಮಾರ್ಚ್ 2019, 11:14 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್‌ ಸ್ವಂತ ಬಲದಿಂದ ಎದುರಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಶನಿವಾರ ಹೇಳಿದ್ದಾರೆ.

ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷ ಅಬ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದೂ ಅವರು ತಿಳಿಸಿದ್ದಾರೆ.

‘ಮೈತ್ರಿ ಬಗ್ಗೆ ಸಮಾನ ಮನಸ್ಕ ಪಕ್ಷಗಳು ಒಂದೇ ರೀತಿಯಲ್ಲಿ ಯೋಚಿಸುವುದು ಉತ್ತಮ. ನಮ್ಮದು, ಸಮಾಜವಾದಿ ಪಕ್ಷ (ಎಸ್‌ಪಿ) ಹಾಗೂ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ದಾರಿ ಭಿನ್ನವಾಗಿದ್ದರೂ ಉದ್ದೇಶ ಒಂದೇ ಆಗಿದೆ’ ಎಂದು ಉತ್ತರ ಪ್ರದೇಶದ ಪಶ್ಚಿಮ ಭಾಗದ ಉಸ್ತುವಾರಿಯೂ ಆಗಿರುವ ಸಿಂಧಿಯಾ ಹೇಳಿದ್ದಾರೆ.

ಎಸ್‌ಪಿ–ಬಿಎಸ್‌ಪಿ ಮೈತ್ರಿಯು ಕಾಂಗ್ರೆಸ್‌ಗೆ ಎರಡು ಸ್ಥಾನ ಬಿಟ್ಟುಕೊಟ್ಟಿರುವ ಬಗ್ಗೆ ಅಖಿಲೇಶ್‌ ಯಾದವ್‌ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಂಧಿಯಾ, ‘ಹಾಗಾದರೆ ನಾವೇ ಅವರಿಗೆ 2–3 ಸ್ಥಾನಗಳನ್ನು ಬಿಟ್ಟುಕೊಡುತ್ತೇವೆ’ ಎಂದರು.

ಕೇಂದ್ರದಲ್ಲಿ ಯುಪಿಎ ಸರ್ಕಾರ ರಚನೆಯಾಗಬೇಕು ಮತ್ತು 2022ರಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT