ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರ: ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಸೋನಿಯಾ ಆಗ್ರಹ 

Last Updated 26 ಫೆಬ್ರುವರಿ 2020, 10:42 IST
ಅಕ್ಷರ ಗಾತ್ರ

ನವದೆಹಲಿ:‘ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರಕ್ಕೆ ಕೇಂದ್ರ ಮತ್ತು ದೆಹಲಿ ಸರ್ಕಾರಗಳು ನೇರ ಜವಾಬ್ದಾರಿಯಾಗಿವೆ. ಕೂಡಲೇ ಗೃಹ ಸಚಿವ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದುಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಬುಧವಾರ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯಲ್ಲಿ ಮಾತನಾಡಿದ ಅವರು, ದೆಹಲಿಯ ಹಿಂಸಾಚಾರ ಮತ್ತು ದುರಂತ ಘಟನೆಗಳ ಹಿಂದೆಪಿತೂರಿ ಇದೆಎಂದು ಆರೋಪಿಸಿದರು.

ಇದೇ ವೇಳೆ ದೆಹಲಿ ಸರ್ಕಾರ ಮತ್ತು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಕೂಡ ಶಾಂತಿ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾಡಿದರು.

ಹಿಂಸಾಚಾರವನ್ನು ಪ್ರಚೋದಿಸುವ ರೀತಿಯಲ್ಲಿ ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ಹೇಳಿಕೆ ನೀಡಿರುವುದಕ್ಕೆ ಸೋನಿಯಾ ಆಕ್ಷೇಪ ವ್ಯಕ್ತಪಡಿಸಿದರು. ಜೊತೆಗೆ, ದೆಹಲಿಯ ಪರಿಸ್ಥಿತಿ ಗಂಭೀರವಾಗಿದೆ ಮತ್ತು ತುರ್ತು ಕ್ರಮದ ಅಗತ್ಯತೆ ಇದೆ ಎಂದು ಹೇಳಿದರು.

ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಬೇಕು ಹಾಗೂ ಮೊಹಲ್ಲಾಗಳಲ್ಲಿ ಶಾಂತಿ ಸಮಿತಿಗಳನ್ನು ರಚಿಸಬೇಕು ಎಂದು ದೆಹಲಿ ಹಿಂಸಾಚಾರದ ಬಗ್ಗೆ ಸಿಡಬ್ಲ್ಯುಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ದೆಹಲಿ ಮುಖ್ಯಮಂತ್ರಿಗಳು ಕೂಡಲೇ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಮನವಿ ಮಾಡಿದರು.

ಏತನ್ಮಧ್ಯೆ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅಲಭ್ಯತೆ ಗಮನದಲ್ಲಿಟ್ಟುಕೊಂಡು ರಾಷ್ಟ್ರಪತಿ ಭವನಕ್ಕೆ ಹಮ್ಮಿಕೊಂಡಿದ್ದ ಮೆರವಣಿಗೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT