ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡದಲ್ಲಿ ‘ಕೈ’ ಅಧಿಪತ್ಯ ಆರಂಭ

ಮೂರೂ ರಾಜ್ಯಗಳಲ್ಲಿ ನೂತನ ಮುಖ್ಯಮಂತ್ರಿಗಳಿಂದ ಅಧಿಕಾರ ಸ್ವೀಕಾರ
Last Updated 17 ಡಿಸೆಂಬರ್ 2018, 13:50 IST
ಅಕ್ಷರ ಗಾತ್ರ

ಜೈಪುರ, ಭೋಪಾಲ್, ರಾಯಪುರ:ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸಗಡದಲ್ಲಿ ಕಾಂಗ್ರೆಸ್ ಆಡಳಿತ ಅಧಿಕೃತವಾಗಿ ಆರಂಭಗೊಂಡಿದೆ. ಮೂರೂ ರಾಜ್ಯಗಳಲ್ಲಿ ನೂತನ ಮುಖ್ಯಮಂತ್ರಿಗಳ ಮತ್ತು ಕೆಲವು ಸಚಿವರ ಪ್ರಮಾಣವಚನ ಸ್ವೀಕಾರ ಸೋಮವಾರ ನಡೆಯಿತು.

ಬೆಳಿಗ್ಗೆ ಜೈಪುರದಲ್ಲಿ ನಡೆದ ಸಮಾರಂಭದಲ್ಲಿಗಾಂಧಿ–ನೆಹರು ಕುಟುಂಬದ ನಿಷ್ಠಾವಂತ ಎಂದು ಗುರುತಿಸಿಕೊಂಡಿರುವ ಅಶೋಕ್ ಗೆಹ್ಲೋಟ್‌(67) ಮೂರನೇ ಬಾರಿ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದರು. ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸಹ ಸಮಾರಂಭದಲ್ಲಿ ಹಾಜರಿದ್ದರು.

ಭೊಪಾಲ್‌ನಲ್ಲಿ ಮಧ್ಯಾಹ್ನ 2.30ಕ್ಕೆ ನಡೆದ ಸಮಾರಂಭದಲ್ಲಿ ಮಧ್ಯಪ್ರದೇಶದ ನೂತನ ಖ್ಯಮಂತ್ರಿಯಾಗಿಕಮಲನಾಥ್ ಅವರುಪ್ರಮಾಣವಚನ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇಅಲ್ಪಾವಧಿ ಕೃಷಿ ಸಾಲ ಮನ್ನಾಗೆ ಸಂಬಂಧಿಸಿದ ಆದೇಶಕ್ಕೆ ಕಮಲನಾಥ್ ಸಹಿ ಹಾಕಿದ್ದು, ಚುನಾವಣಾಪೂರ್ವದಲ್ಲಿ ನೀಡಿದ್ದ ಭರವಸೆಗಳ ಈಡೇರಿಕೆಗೆ ಬದ್ಧ ಎಂಬ ಸಂದೇಶ ರವಾನಿಸಿದ್ದಾರೆ.

ರಾಯಪುರದಬಲ್ಬೀರ್‌ ಸಿಂಗ್‌ ಜುನೇಜ ಒಳಾಂಗಣ ಕ್ರೀಡಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆದ ಸಮಾರಂಭದಲ್ಲಿ ಛತ್ತೀಸಗಡದ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಘೆಲ್ಮಾಣವಚನ ಸ್ವೀಕರಿಸಿದರು. ಜತೆಗೆ,ಟಿ.ಎಸ್‌. ಸಿಂಗ್ ದಿಯೊ ಮತ್ತು ತಾಮ್ರಧ್ವಜ ಸಾಹು ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇದರೊಂದಿಗೆ, ಛತ್ತೀಸಗಡದಲ್ಲಿ 15 ವರ್ಷಗಳ ಬಳಿಕ ಕಾಂಗ್ರೆಸ್ ಸರ್ಕಾರ ರಚನೆಯಾದಂತಾಗಿದೆ.

ಒಗ್ಗಟ್ಟು ಪ್ರದರ್ಶಿಸಿದ ಪ್ರತಿಪಕ್ಷಗಳ ನಾಯಕರು: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೆ ವೇದಕೆಯಾಯಿತು. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ, ಮುಖಂಡರಾದ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ, ಎಲ್‌‍ಜೆಡಿ ನಾಯಕ ಶರದ್ ಯಾದವ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕಾರ್ಯಕ್ರಮದಲ್ಲಿ ಭಾಗಿಯಾದರು.

ಅಖಿಲೇಶ್, ಮಾಯಾವತಿ ಗೈರು: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಬೆಂಬಲ ಘೋಷಿಸಿದ್ದರೂ ಸಮಾಜವಾದಿ ಪಕ್ಷದ ನಾಯಕ ಅಖಲೇಶ್ ಯಾದವ್, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹಾಜರಿರಲಿಲ್ಲ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT