ಗಾಂಧಿ ಹತ್ಯೆ ಮರುಸೃಷ್ಟಿ ವಿರುದ್ಧ ಪ್ರತಿಭಟನೆ

7

ಗಾಂಧಿ ಹತ್ಯೆ ಮರುಸೃಷ್ಟಿ ವಿರುದ್ಧ ಪ್ರತಿಭಟನೆ

Published:
Updated:

ನವದೆಹಲಿ: ಮಹಾತ್ಮ ಗಾಂಧಿ ಅವರ ಹತ್ಯೆಯನ್ನು ಮರುಸೃಷ್ಟಿಸಿದ ಅಖಿಲ ಭಾರತ ಹಿಂದೂ ಮಹಾಸಭಾದ ನಡೆಯ ವಿರುದ್ಧ ಕಾಂಗ್ರೆಸ್ ಸೋಮವಾರ (ಫೆ.4) ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ.

1948ರ ಜನವರಿ 30ರಂದು ನಾಥೂರಾಮ್ ಗೋಡ್ಸೆಯಿಂದ ಮಹಾತ್ಮ ಗಾಂಧಿ ಅವರ ಹತ್ಯೆ ನಡೆದಿತ್ತು. ಹೀಗಾಗಿ ಪ್ರತಿ ಜನವರಿ 30ರಂದು ದೇಶದಾದ್ಯಂತ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ.

ಆದರೆ ಉತ್ತರ ಪ್ರದೇಶದ ಅಲಿಗಡದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಅವರು ಇದೇ ಜನವರಿ 30ರಂದು ಗಾಂಧಿಯ ಪ್ರತಿಕೃತಿಗೆ ಗುಂಡಿಕ್ಕಿದ್ದರು. ನಂತರ ಗೋಡ್ಸೆಯ ಪ್ರತಿಕೃತಿಗೆ ಮಾಲಾರ್ಪಣೆ ಮಾಡಿದ್ದರು. 

ಇದರ ವಿರುದ್ಧ ಎಲ್ಲಾ ರಾಜ್ಯಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !