ಗುರುವಾರ , ಫೆಬ್ರವರಿ 27, 2020
19 °C

ಹಾರ್ದಿಕ್‌ ಪಟೇಲ್‌ಗೆ ಜಾಮೀನು

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್ : ವಿಚಾರಣಾ ನ್ಯಾಯಾಲಯದ ಎದುರು ಹಾಜರಾಗಲು ವಿಫಲವಾಗಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್‌ಗೆ ನಾಲ್ಕು ದಿನಗಳ ಬಳಿಕ ಬುಧವಾರ ಜಾಮೀನು ದೊರೆತಿದೆ.

ನ್ಯಾಯಾಲಯದ ವಿಚಾರಣೆಗೆ ಸಹಕರಿಸಬೇಕು ಹಾಗೂ ನಂಬಲರ್ಹವಾದ ಕಾರಣದ ಹೊರತಾಗಿ ವಿಚಾರಣೆ ಮುಂದೂಡಲು ಕೋರಬಾರದು ಎನ್ನುವ ಷರತ್ತಿನ ಮೇಲೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಜಿ. ಗನಾತ್ರ ಅವರು ಜಾಮೀನು ಮಂಜೂರು ಮಾಡಿದರು.

ಮುಂದಿನ ವಿಚಾರಣೆ ಇದೇ 24ಕ್ಕೆ ನಿಗದಿಯಾಗಿದೆ.

ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ 2015ರಲ್ಲಿ ಹಾರ್ದಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಈ ವೇಳೆ ಗುಜರಾತ್‌ನ ಹಲವೆಡೆ ಗಲಭೆ ಉಂಟಾಗಿ, ಹಾರ್ದಿಕ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು